Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

114ನೇ ವರ್ಷದ ವಿಶ್ವದ ಅತ್ಯಂತ ಹಿರಿಯ ಫೌಜಾ ಸಿಂಗ್ ಅಪಘಾತದಲ್ಲಿ ದುರ್ಮರಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 21 ವೀಕ್ಷಣೆಗಳು
fauja singh

114 ವರ್ಷದ ಅತ್ಯಂತ ಹಿರಿಯ ಮ್ಯಾರಥಾನ್ ಕ್ರೀಡಾಪಟು ಫೌಜಾ ಸಿಂಗ್ ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಆಘಾತಕಾರಿ ಘಟನೆ ಪಂಜಾಬ್ ಜಲಂಧರ್ ನಲ್ಲಿ ಮೃತಪಟ್ಟಿದ್ದಾರೆ.

ಸೋಮವಾರ ಸಂಜೆ ಜಲಂಧರ್​​ನಲ್ಲಿರುವ ತಮ್ಮ ಮನೆಯ ಹೊರಗೆ ವಾಕಿಂಗ್ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಫೌಜಾ ಸಿಂಗ್ 2000ನೇ ಇಸವಿಯಲ್ಲಿ ತಮ್ಮ ಮ್ಯಾರಥಾನ್ ಪ್ರಯಾಣವನ್ನು ಆರಂಭಿಸಿದ್ದರು. ಅಂತಿಮವಾಗಿ ಎಂಟು ರೇಸ್​​ಗಳಲ್ಲಿ ಅವರು ಭಾಗವಹಿಸಿದ್ದರು. 2011ರಲ್ಲಿ ಅವರು ಟೊರಂಟೊ ಮ್ಯಾರಥಾನ್​ನಲ್ಲಿ ಭಾಗವಹಿಸುವ ಮೂಲಕ ಪ್ರಪಂಚದಾದ್ಯಂತ ಸುದ್ದಿಯಾದರು. ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಎಂದು ಗುರುತಿಸಲ್ಪಟ್ಟರು. ಆದರೆ ಜನನ ಪ್ರಮಾಣಪತ್ರ ಇಲ್ಲದ ಕಾರಣ ಗಿನ್ನೆಸ್ ಬುಕ್ ಆಫ್ ವರ್ಲ್ಡ್​ ರೆಕಾರ್ಡ್ಸ್​ನಲ್ಲಿ ಅಧಿಕೃತವಾಗಿ ನೋಂದಾಯಿಸಲು ಸಾಧ್ಯವಾಗಲಿಲ್ಲ.

2012ರಲ್ಲಿ ಅವರು ಲಂಡನ್ ಮ್ಯಾರಥಾನ್ ಸಮಯದಲ್ಲಿ 20 ಕಿ.ಮೀ ಪೂರ್ಣಗೊಳಿಸುವ ಮೂಲಕ ಮತ್ತೊಮ್ಮೆ ಜಗತ್ತನ್ನು ಬೆರಗುಗೊಳಿಸಿದ್ದರು. ಅವರ ಕೊನೆಯ ವೃತ್ತಿಪರ ಓಟವು 2013ರಲ್ಲಿ 101ನೇ ವಯಸ್ಸಿನಲ್ಲಿ ಹಾಂಗ್ ಕಾಂಗ್ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದರು.

89 ವರ್ಷವಾಗಿದ್ದಾಗ ಅವರ ಪತ್ನಿ ಮತ್ತು ಮಗ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಬಳಿಕ ಅವರು ಕುಗ್ಗಿ ಹೋಗಿದ್ದರು. ಬಳಿಕ ಅವರು ಖಿನ್ನತೆ ವಿರುದ್ಧ ಹೋರಾಡಲು ಆರಂಭಿಸಿದ್ದರು. ಮ್ಯಾರಥಾನ್​ಗೆ ಸೇರಲು ನಿರ್ಧರಿಸಿದ್ದರು. ಅವರ ಪರಿಶ್ರಮ ಮತ್ತು ದೃಢಸಂಕಲ್ಪದಿಂದ ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದರು. 1911ರಲ್ಲಿ ರೈತ ಕುಟುಂಬದಲ್ಲಿ ಜನಿಸಿದ್ದ ಸಿಂಗ್‌ ಕಿರಿಯ ಸಹೋದರನಾಗಿದ್ದರು.

ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳ ಗೆದ್ದ ಸಾಧನೆ ಸಿಂಗ್‌ ಅವರದ್ದು. ಸಿಂಗ್‌ ಅವರ ಓಟದ ವೈಖರಿ, ಸಹಿಷ್ಣುತೆಯಿಂದಾಗಿ ಅವರನ್ನು ‘ಟರ್ಬನ್ಡ್ ಟೊರ್ನಾಡೊ’ಎಂದೇ ಕರೆಯಲಾಗುತ್ತಿತ್ತು. 2012ರ ಲಂಡನ್‌ ಒಲಿಂಪಿಕ್ಸ್‌ನಲ್ಲಿ ಸಿಂಗ್‌ ಜ್ಯೋತಿ ಹಿಡಿದಿದ್ದರು.

ಫೌಜಾ ಸಿಂಗ್ ಅವರಿಗೆ ಡಿಕ್ಕಿ ಹೊಡೆದ ಕಾರು ಪತ್ತೆಯಾಗಿಲ್ಲ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಮತ್ತು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಫೌಜಾ ಸಿಂಗ್‌ ಅವರ ನಿಧನಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment