Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಕ್ರಿಕೆಟಿಗರಿಗೆ ಸಿಹಿಸುದ್ದಿ: 2028ರ ಒಲಿಂಪಿಕ್ಸ್ ಗೆ ಟಿ-20 ಕ್ರಿಕೆಟ್ ಸೇರ್ಪಡೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 26 ವೀಕ್ಷಣೆಗಳು
india cricket
india cricket

ನವದೆಹಲಿ: 2028ರಲ್ಲಿ ಲಾಸ್ ಏಂಜಲೆಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಟಿ20 ಕ್ರಿಕೆಟ್ ಅನ್ನು ಅಧಿಕೃತವಾಗಿ ಸೇರಿಸಲಾಗಿದೆ.

ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ತನ್ನ ಸಭೆಯಲ್ಲಿ ಈ ನಿರ್ಧಾರವನ್ನು ಘೋಷಿಸಿದೆ. ಕ್ರಿಕೆಟ್‌ನ ಜಾಗತಿಕ ಜನಪ್ರಿಯತೆಯನ್ನು ಗಮನಿಸಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

1900ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಪಂದ್ಯ ನಡೆದ ಬಳಿಕ, ೧೨೮ ವರ್ಷಗಳ ನಂತರ ಈ ಕ್ರೀಡೆ ಮತ್ತೆ ಒಲಿಂಪಿಕ್ಸ್‌ಗೆ ಮರಳುತ್ತಿದೆ.

ಲಾಸ್ ಏಂಜಲೆಸ್ ಒಲಿಂಪಿಕ್ಸ್‌ನಲ್ಲಿ ಟಿ20 ಕ್ರಿಕೆಟ್‌ನ ಪುರುಷರ ಮತ್ತು ಮಹಿಳೆಯರ ವಿಭಾಗಗಳಲ್ಲಿ ತಲಾ 6 ತಂಡಗಳು ಸ್ಪರ್ಧಿಸಲಿವೆ.

ತಂಡಗಳ ಆಯ್ಕೆಯು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯ ರ?ಯಾಂಕಿಂಗ್ ಅಥವಾ ಅರ್ಹತಾ ಸ್ಪರ್ಧೆಗಳ ಆಧಾರದ ಮೇಲೆ ನಡೆಯಲಿದೆ.

1900ರಲ್ಲಿ ಇಂಗ್ಲೆಂಡ್ ಮತ್ತು ಫ್ರಾನ್ಸ್ ನಡುವೆ ನಡೆದ ಕ್ರಿಕೆಟ್ ಪಂದ್ಯದ ಬಳಿಕ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಕಾಣಿಸಿಕೊಂಡಿರಲಿಲ್ಲ. ಈಗ ಮತ್ತೆ ಈ ಕ್ರೀಡೆಗೆ ಸ್ಥಾನ ಸಿಕ್ಕಿರುವುದು ಐತಿಹಾಸಿಕ ಕ್ಷಣವಾಗಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ನಿರ್ಧಾರವನ್ನು ಸ್ವಾಗತಿಸಿದ್ದು, ಕ್ರಿಕೆಟ್‌ಗೆ ಜಾಗತಿಕ ಪ್ರಸಾರಕ್ಕೆ ಇದು ಸಹಾಯಕವಾಗಲಿದೆ ಎಂದು ಹೇಳಿದೆ.

ಐಸಿಸಿ ಕೂಡ ಈ ಸೇರ್ಪಡೆಗೆ ಪ್ರಮುಖ ಪಾತ್ರ ವಹಿಸಿದ್ದು, ಹಲವು ವರ್ಷಗಳಿಂದ ಈ ಪ್ರಯತ್ನದಲ್ಲಿತ್ತು. ಒಲಿಂಪಿಕ್ ಸಮಿತಿಯ ಈ ನಿರ್ಧಾರದಿಂದ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಗಟ್ಟಿಯಾಗಿ ನೆಲೆ ನೆಲ್ಲಲು ಕ್ರಿಕೆಟ್‌ಗೆ ನೆರವಾಗಲಿದೆ ಎಂದು ನಂಬಲಾಗಿದೆ.

ಈ ನಿರ್ಧಾರವು ಕ್ರಿಕೆಟ್ ಕ್ರೀಡೆಗೆ ವಿಶ್ವಮಟ್ಟದಲ್ಲಿ ಹೊಸ ಗತಿಯನ್ನು ನೀಡಲಿದೆ. ಅನೇಕ ಕ್ರಿಕೆಟಿಗರು ಒಲಿಂಪಿಕ್ ಪದಕವನ್ನು ಗುರಿಯಾಗಿಟ್ಟುಕೊಂಡು ತಮ್ಮ ಆಟಕ್ಕೆ ಹೊಸ ಉತ್ಸಾಹ ತುಂಬಿಕೊಳ್ಳುವ ಸಾಧ್ಯತೆಯಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment