ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.
ವಿಧಾನಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಐಪಿಎಲ್ ಟಿ-20 ಟೂರ್ನಿಯ ಪಂದ್ಯಗಳನ್ನು ಆಡಿಸಲು ಅನುಮತಿ ನೀಡಲಾಯಿತು.
ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಚೊಚ್ಚಲ ಪ್ರಶಸ್ತಿ ಗೆದ್ದ ಸಂಭ್ರಮಾಚರಣೆ ವೇಳೆ 11 ಮಂದಿ ಅಸುನೀಗಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಹಾಗೂ ಡಿ. ಕುನ್ಹಾ ಸಮಿತಿ ಹಲವು ಷರತ್ತುಗಳನ್ನು ವಿಧಿಸಿತ್ತು.
ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಚೊಚ್ಚಲ ಪ್ರಶಸ್ತಿ ಗೆದ್ದ ಸಂಭ್ರಮಾಚರಣೆ ವೇಳೆ 11 ಮಂದಿ ಅಸುನೀಗಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಹಾಗೂ ಡಿ. ಕುನ್ಹಾ ಸಮಿತಿ ಹಲವು ಷರತ್ತುಗಳನ್ನು ವಿಧಿಸಿತ್ತು.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹಾಗೂ ಆರ್ ಸಿಬಿ ಷರತ್ತುಗಳನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಈ ಬಗ್ಗೆ ಬುಧವಾರ ನಡೆದ ಸಭೆಯಲ್ಲಿ ತೃಪ್ತಿ ವ್ಯಕ್ತಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟದಲ್ಲಿ ಐಪಿಎಲ್ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿಸಲು ಅನುಮತಿ ನೀಡಲಾಯಿತು.
ಮಾರ್ಚ್ 6ರಂದು ಬಜೆಟ್ ಮಂಡನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 6ರಿಂದ 27ರವರೆಗೆ ಬಜೆಟ್ ಅಧಿವೇಶನ ನಡೆಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.
ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ.