Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಏಷ್ಯಾಕಪ್‌ ವಿವಾದ: ಪಾಕಿಸ್ತಾನದ ರೌಫ್‌ ಗೆ 2 ಪಂದ್ಯ ನಿಷೇಧ; ಸೂರ್ಯ, ಬುಮ್ರಾಗೆ ದಂಡ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು
ind pak players

ಏಷ್ಯಾಕಪ್‌ ಟೂರ್ನಿಯ ವೇಳೆ ಆಟಗಾರರು ತೋರಿದ ದುರ್ವರ್ನತೆ ಹಿನ್ನೆಲೆಯಲ್ಲಿ ಐಸಿಸಿ ಭಾರತದ ಮೂವರು ಮತ್ತು ಪಾಕಿಸ್ತಾನದ ಇಬ್ಬರು ಆಟಗಾರರಿಗೆ ದಂಡ ವಿಧಿಸಿದೆ. ಹ್ಯಾರಿಸ್ ರೌಫ್‌ ಗೆ ಅತೀ ಕಠಿಣ ದಂಡ ವಿಧಿಸಲಾಗಿದೆ.

ಕಳೆದ ತಿಂಗಳು ದುಬೈನಲ್ಲಿ ನಡೆದ ಏಷ್ಯಾಕಪ್‌ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮೂರು ಬಾರಿ ಸೆಪ್ಟೆಂಬರ್‌ 14, 21 ಮತ್ತು 28ರಂದು ಮುಖಾಮುಖಿ ಆಗಿದ್ದವು. ಈ ಮುಖಾಮುಖಿ ವೇಳೆ ಎರಡೂ ತಂಡಗಳ ಆಟಗಾರರು ಮೈದಾನದಲ್ಲಿ ಅನುಚಿತವಾಗಿ ವರ್ತಿಸಿ ನಿಯಮ ಉಲ್ಲಂಘಿಸಿದ್ದರು. ಪಾಕಿಸ್ತಾನದ ಇಬ್ಬರು ಹಾಗೂ ಭಾರತದ ಮೂವರು ಆಟಗಾರರ ಮೇಲಿನ ದೂರಿನ ಕುರಿತು ವಿಚಾರಣೆ ನಡೆಸಿದ ಐಸಿಸಿ ಇಂದು ತೀರ್ಪು ಪ್ರಕಟಿಸಿದೆ.

ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಹ್ಯಾರಿಸ್‌ ರೌಫ್‌ ಗೆ 2 ಪಂದ್ಯ ನಿಷೇಧ ಹಾಗೂ ಪಂದ್ಯ ಶುಲ್ಕದ ಶೇ.೩೦ರಷ್ಟು ದಂಡ ವಿಧಿಸಲಾಗಿದೆ. ಮತ್ತೊಬ್ಬ ಆಟಗಾರ ಸಾಹಿಬ್ಜಾದಾ ಫರ್ಹಾನ್‌ ಗೆ ಕೇವಲ ಎಚ್ಚರಿಕೆ ನೀಡಲಾಗಿದೆ.
ಹ್ಯಾರಿಸ್‌ ರೌಫ್‌ ಮೊದಲ ಪಂದ್ಯದಲ್ಲಿ ಬ್ಯಾಟ್‌ ಗನ್‌ ರೀತಿ ಹಿಡಿದು ಸಂಭ್ರಮಿಸಿದರೆ, ನಂತರ ಬೆರಳಲ್ಲಿ 6-0 ಎಂದು ತೋರಿಸಿ ಭಾರತದ ವಿಮಾನಗಳು ಆಪರೇಷನ್‌ ಸಿಂಧೂರ್‌ ವೇಳೆ ಪತನಗೊಂಡಿವೆ ಎಂದು ಸನ್ಹೆ ಮಾಡಿದ್ದರು. ಈ ಬಗ್ಗೆ ಬಿಸಿಸಿಐ ದೂರು ನೀಡಿತ್ತು.

ಭಾರತ ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ ಸುದ್ದಿಗೋಷ್ಠಿಯಲ್ಲಿ ಪೆಹಲ್ಗಾಮ್‌ ದಾಳಿಯ ಸಂತ್ರಸ್ತರಿಗೆ ಗೆಲುವು ಅರ್ಪಿಸುವುದಾಗಿ ಹೇಳಿಕೆ ನೀಡಿದ್ದರು. ಕ್ರೀಡೆಯಲ್ಲಿ ರಾಜಕೀಯ ಬೆರೆಸಿದ್ದಕ್ಕಾಗಿ ಸೂರ್ಯಕುಮಾರ್‌ ಯಾದವ್‌ ಗೆ ಶೇ.೩೦ರಷ್ಟು ದಂಡ ವಿಧಿಸಲಾಗಿದೆ.

ಭಾರತ ತಂಡದ ಮಧ್ಯಮ ವೇಗಿ ಜಸ್‌ ಪ್ರೀತ್‌ ಬುಮ್ರಾ ವಿಮಾನ ಬಿದ್ದ ರೀತಿ ಸನ್ನೆ ಮಾಡಿ ಪಾಕಿಸ್ತಾನ ಆಟಗಾರನಿಗೆ ಸೂಚಿಸಿದ್ದಕ್ಕಾಗಿ ಐಸಿಸಿ ರ್ಯಾಂಕಿಂಗ್‌ ನಲ್ಲಿ ಒಂದು ಅಂಕ ಕಡಿತ ಮಾಡಲಾಗಿದೆ. ಮತ್ತೊಬ್ಬ ವೇಗಿ ಅರ್ಷದೀಪ್‌ ಸಿಂಗ್‌ ಗೆ ಎಚ್ಚರಿಕೆ ನೀಡಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment