ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ನಡೆಯಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಆಲ್ ರೌಂಡರ್ ರವೀಂದ್ರ ಜಡೇಜಾಗೆ ಉಪನಾಯಕನಾಗಿ ಬಡ್ತಿ ನೀಡಲಾಗಿದೆ.
ಅಜಿತ್ ಅರ್ಗಕರ್ ನೇತೃತ್ವದ ಆಯ್ಕೆ ಸಮಿತಿ ಸುದೀರ್ಘ ಚರ್ಚೆಯ ನಂತರ 15 ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಶ್ರೇಯಸ್ ಅಯ್ಯರ್ ಮತ್ತು ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಜಡೇಜಾಗೆ ಆಲ್ ರೌಂಡರ್ ಸ್ಥಾನ ನೀಡಲಾಗಿದೆ.
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದನ್ನು ಗಮನಿಸಿ ಜಡೇಜಾಗೆ ತಂಡದಲ್ಲಿ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ. ಇಂಗ್ಲೆಂಡ್ ಸರಣಿಯಲ್ಲಿ ಜಡೇಜಾ 10 ಇನಿಂಗ್ಸ್ ಗಳಲ್ಲಿ 515 ರನ್ ಗಳಿಸಿ ಅತೀ ಹೆಚ್ಚು ರನ್ ಗಳಿಸಿದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದರು.
ತೂಕ ಕಡಿಮೆ ಮಾಡಿಕೊಂಡಿದ್ದೂಅಲ್ಲದೇ ದೇಶೀಯ ಕ್ರಿಕೆಟ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸರ್ಫರಾಜ್ ಖಾನ್ ಅವರನ್ನು ಮತ್ತೆ ಕೈ ಬಿಡಲಾಗಿದೆ. ಮೊಹಮದ್ ಶಮಿ ಅವರನ್ನು ಕಡೆಗಣಿಸಲಾಗಿದೆ.
ಅಕ್ಟೋಬರ್ 2ರಂದು ಅಹಮದಾಬಾದ್ ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದ್ದು, ಅಕ್ಟೋಬರ್ 2ರಂದು ದೆಹಲಿಯಲ್ಲಿ ಎರಡನೇ ಟೆಸ್ಟ್ ನಡೆಯಲಿದೆ.
ಭಾರತ ತಂಡ
ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕಲ್, ಧ್ರುವ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ ಪ್ರೀತ್ ಬುಮ್ರಾ, ಅಕ್ಸರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಜಗದೀಶನ್, ಮೊಹಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಕುಲದೀಪ್ ಯಾದವ್.


