Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಭಾರತ ತ್ರಿವಳಿ ಶತಕ: ಸೋಲಿನ ಸುಳಿಯಲ್ಲಿ ವೆಸ್ಟ್ ಇಂಡೀಸ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು
dhurva jurel

ಮೂವರು ಬ್ಯಾಟ್ಸ್ ಮನ್ ಗಳು ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರೀ ಮುನ್ನಡೆ ದಾಖಲಿಸಿದ್ದು, ಪ್ರವಾಸಿ ವೆಸ್ಟ್ ಇಂಡೀಸ್ ತಂಡ ಹೀನಾಯ ಸೋಲಿನ ಭೀತಿಗೆ ಸಿಲುಕಿದೆ.

ಅಹಮದಾಬಾದ್ ನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶುಕ್ರವಾರ 2 ವಿಕೆಟ್ ಗೆ 121 ರನ್ ಗಳಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಭಾರತ ತಂಡ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 448 ರನ್ ಗಳಿಸಿದೆ. ಇದರೊಂದಿಗೆ ಭಾರತ 226 ರನ್ ಗಳ ಭಾರೀ ಮುನ್ನಡೆ ದಾಖಲಿಸಿದೆ.

ಭಾರತದ ಪರ ಕೆಎಲ್ ರಾಹುಲ್, ಧ್ರುವ ಜುರೆಲ್ ಮತ್ತು ರವೀಂದ್ರ ಜಡೇಜಾ ಶತಕ ಬಾರಿಸಿ ತಂಡವನ್ನು ಆಧರಿಸಿದರು.

197 ಎಸೆತಗಳನ್ನು ಎದುರಿಸಿದ ರಾಹುಲ್ 12 ಬೌಂಡರಿ ಸಹಾಯದಿಂದ ಶತಕ ಪೂರೈಸಿ ಜೊಮೆಲ್ ವಾರಿಯರ್ ಎಸೆತದಲ್ಲಿ ಔಟಾದರು. ಇದು ರಾಹುಲ್ ಪಾಲಿಗೆ 11ನೇ ಟೆಸ್ಟ್ ಶತಕವಾಗಿದೆ.

ರಾಹುಲ್ ತವರಿನಲ್ಲಿ 3211 ದಿನಗಳ ನಂತರ ದಾಖಲಿಸಿದ ಮೊದಲ ಶತಕ ಇದಾಗಿದೆ. ಚೆನ್ನೈನಲ್ಲಿ 2011ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೊನೆಯ ಬಾರಿಗೆ ಶತಕ ಸಿಡಿಸಿದ್ದರು.

ರಾಹುಲ್ ತಮ್ತು ಶುಭಮನ್ ಗಿಲ್ 3ನೇ ವಿಕೆಟ್ ಗೆ 98 ರನ್ ಜೊತೆಯಾಟ ನಿಭಾಯಿಸಿದರು. ನಾಯಕ ಗಿಲ್ 100 ಎಸೆತಗಳಲ್ಲಿ 5 ಬೌಂಡರಿ ಒಳಗೊಂಡ ಬರೋಬ್ಬರಿ ಅರ್ಧಶತಕ (50) ಬಾರಿಸಿ ನಿರ್ಗಮಿಸಿದರು.

ನಂತರ ಧ್ರುವ ಜುರೆಲ್ ಮತ್ತು ಉಪನಾಯಕ ರವೀಂದ್ರ ಜಡೇಜಾ ಶತಕಗಳನ್ನು ಬಾರಿಸಿದ್ದೂ ಅಲ್ಲದೇ 5ನೇ ವಿಕೆಟ್ ಗೆ 206 ರನ್ ಗಳ ಜೊತೆಯಾಟ ನಿಭಾಯಿಸಿ ತಂಡದ ಮೊತ್ತ 400ರ ಗಡಿ ದಾಟುವಂತೆ ನೋಡಿಕೊಂಡರು.

210 ಎಸೆಗಳಲ್ಲಿ 15 ಬೌಂಡರಿ ಮತ್ತು 3 ಸಿಕ್ಸರ್ ನೆರವಿನೊಂದಿಗೆ ಧ್ರುವ ಜುರೆಲ್ ಚೊಚ್ಚಲ ಶತಕ ದಾಖಲಿಸಿದರೆ, ರವೀಂದ್ರ ಜಡೇಜಾ 176 ಎಸೆತಗಳಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್ ಸಹಾಯದಿಂದ 104 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment