ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರರು ತಂಗಿದ್ದ ಹೈದರಾಬಾದ್ ನ ಬಂಜಾರ ಹಿಲ್ಸ್ ನಲ್ಲಿರುವ ಪಂಚತಾರಾ ಹೋಟೆಲ್ ನಲ್ಲಿ ಅಗ್ನಿ ಅವಘಢ ಸಂಭವಿಸಿದೆ.
ಪಾರ್ಕ್ ಹೇಟ್ ಹೋಟೆಲ್ ನ 3ನೇ ಮಹಡಿಯಲ್ಲಿರುವ ಸ್ಪಾದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ದಳ ಸಿಬ್ಬಂದಿ ಯಶಸ್ವಿಯಾಗಿದ್ದ, ಯಾವುದೇ ಅಪಾಯ ಸಂಭವಿಸಿಲ್ಲ.
ಸನ್ ರೈಸರ್ಸ್ ಹೈದರಾಬಾದ್ ಆಟಗಾರರು ಹೊಟೇಲ್ ತೊರೆದು ನಿರ್ಗಮಿಸುತ್ತಿದ್ದಾಗ ಹೋಟೆಲ್ ನಲ್ಲಿ ಬೆಂಕಿ ಅವಘಢ ಸಂಭವಿಸಿದೆ ಎಂದು ಹೇಳಲಾಗಿದೆ.
ಅಗ್ನಿ ಅವಘಢದಿಂದ ಯಾವುದೇ ಹಾನಿ ಸಂಭವಿಸಿಲ್ಲ. ಆದರೂ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳಲು ನಿರ್ಧರಿಸಿದ್ದಾರೆ.