ಭಾರತದ ಮಧ್ಯಮ ವೇಗಿ ಜಸ್ ಪ್ರೀತ್ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿಯುತ್ತಿರುವುದು ಅಲ್ಲದೇ ಅತೀ ಹೆಚ್ಚು ರ್ಯಾಂಕಿಂಗ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.
2024ರಲ್ಲಿ ಬುಮ್ರಾ ಟೆಸ್ಟ್ ಕ್ರಿಕೆಟ್ ನಲ್ಲಿ 71 ವಿಕೆಟ್ ಕಬಳಿಸಿದ್ದಾರೆ. ಅಲ್ಲದೇ ಅತೀ ಕಡಿಮೆ ಸರಾಸರಿಯಲ್ಲಿ 200 ವಿಕೆಟ್ ಪಡೆದ ಬೌಲರ್ ಎಂಬ ವಿಶ್ವದಾಖಲೆಯನ್ನು ಆಸ್ಟ್ರೇಲಿಯಾ ಸರಣಿಯಲ್ಲಿ ನಿರ್ಮಿಸಿದರು. ಈ ಮೂಲಕ ವಿಕೆಟ್ ಟೇಕರ್ ಗಳ ಸಾಲಿನಲ್ಲಿ ಮಂಚೂಣಿಯಲ್ಲಿ ನಿಂತರು.
ಗಾಯದ ಸಮಸ್ಯೆ ನಡುವೆಯೂ ಅದ್ಭುತ ಪ್ರದರ್ಶನ ನೀಡುತ್ತಿರುವ ಜಸ್ ಪ್ರೀತ್ ಬುಮ್ರಾ ಮಂಗಳವಾರ ಬಿಡುಗಡೆ ಮಾಡಿದ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ 907 ಅಂಕ ಪಡೆಯುವ ಮೂಲಕ ಅತೀ ಹೆಚ್ಚು ರೇಟಿಂಗ್ ಅಂಕದೊಂದಿಗೆ ಅಗ್ರಸ್ಥಾನ ಪಡೆದ ಭಾರತದ ಮೊದಲ ಬೌಲರ್ ಎನಿಸಿಕೊಂಡರು.
ಇದಕ್ಕೂ ಮುನ್ನ ರವಿಚಂದ್ರನ್ ಅಶ್ವಿನ್ ಗಳಿಸಿದ್ದ ಗರಿಷ್ಠ 904 ಅಂಕದ ಸಾಧನೆಯನ್ನು ಸರಿಗಟ್ಟಿದ್ದರು. ಇದೀಗ ಬುಮ್ರಾ 907 ಅಂಕ ಗಳಿಸುವ ಮೂಲಕ ಅತೀ ಹೆಚ್ಚು ರೇಟಿಂಗ್ ಅಂಕ ಪಡೆದ ಬೌಲರ್ ಎಂಬ ಗೌರವಕ್ಕೆ ಪಾತ್ರರಾದರು.
ಸಿಡ್ನಿ ಬರ್ನೆಸ್ (932), ಜಾರ್ಜ್ ಲೆಹಮನ್ (931) ಅತೀ ಹೆಚ್ಚು ರೇಟಿಂಗ್ ಪಡೆದ ಶತಮಾನ ಆಗಿದೆ. ಪಾಕಿಸ್ತಾನದ ಇಮ್ರಾನ್ ಖಾನ್ (922) ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ (920) ಅಗ್ರ ನಾಲ್ವರಲ್ಲಿ ಸ್ಥಾನ ಪಡೆದಿದ್ದಾರೆ.
ಪ್ರಸ್ತುತ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ (914) ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ (914) ಅಂಕ ಗಳಿಸಿ ಗರಿಷ್ಠ ಸಾಧನೆ ಮಾಡಿದ್ದರು. ಭಾರತ ತಂಡ ಸಿಡ್ನಿಯಲ್ಲಿ ನಡೆಯಲಿರುವ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಡೆಯಲಿದ್ದು, ಭಾರತದ ಪಾಲಿಗೆ ಅತ್ಯಂತ ಮಹತ್ವದ ಪಂದ್ಯವಾಗಿದೆ.