Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ಕ್ರೀಡೆ

ದೇವದತ್ ಪಡಿಕಲ್ ಶತಕ: 412 ರನ್ ಬೆನ್ನಟ್ಟಿ ಗೆದ್ದು ದಾಖಲೆ ಬರೆದ ಕರ್ನಾಟಕ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 30 ವೀಕ್ಷಣೆಗಳು
devdatt padikkal
devdatt padikkal

ಆರಂಭಿಕ ದೇವದತ್ ಪಡಿಕ್ಕಲ್ ಸಿಡಿಸಿದ ಶತಕದ ನೆರವಿನಿಂದ ಕರ್ನಾಟಕ ತಂಡ 412 ರನ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿ ವಿಜಯ್ ಹಜಾರೆ ಕ್ರಿಕೆಟ್ ಟೂರ್ನಿಯಲ್ಲಿ ಭರ್ಜರಿಯಾಗಿ ಶುಭಾರಂಭ ಮಾಡಿದೆ.

ಅಹಮದಾಬಾದ್ ನಲ್ಲಿ ಬುಧವಾರ ನಡೆದ ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ರನ್ ಚೇಸ್ ಮಾಡಲು ನಿರ್ಧರಿಸಿದರು.

ಕರ್ನಾಟಕ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಎರಡನೇ ಅತೀ ದೊಡ್ಡ ಮೊತ್ತವನ್ನು ಯಶಸ್ವಿಯಾಗಿ ಬೆಂಬತ್ತಿದ ದಾಖಲೆ ಬರೆಯಿತು. 2005ರಲ್ಲಿ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ 435 ರನ್ ಚೇಸ್ ಮಾಡಿರುವುದು ಇದುವರೆಗಿನ ದಾಖಲೆಯಾಗಿದೆ.

ಮೊದಲು ಬ್ಯಾಟ್ ಮಾಡಿದ ಜಾರ್ಖಂಡ್ ತಂಡ ನಾಯಕ ಇಶಾನ್ ಕಿಶನ್ ಶತಕ (125) ನೆರವಿನಿಂದ 50 ಓವರ್ ಗಳಲ್ಲಿ 9 ವಿಕೆಟ್ ಗೆ 412 ರನ್ ಪೇರಿಸಿತು. ಕಠಿಣ ಗುರಿ ಬೆಂಬತ್ತಿದ ಕರ್ನಾಟಕ 47.3 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಕರ್ನಾಟಕದ ಪರ ದೇವದತ್ ಪಡಿಕ್ಕಲ್ ಮತ್ತು ಮಯಾಂಕ್ ಅಗರ್ವಾಲ್ ಮೊದಲ ವಿಕೆಟ್ ಗೆ 114 ರನ್ ಜೊತೆಯಾಟದಿಂದ ಭರ್ಜರಿ ಆರಂಭ ನೀಡಿದರು. ಮಯಾಂಕ್ 34 ಎಸೆತಗಳಲ್ಲಿ 10 ಬೌಂಡರಿ ಒಳಗೊಂಡ 54 ರನ್ ಗಳಿಸಿ ಔಟಾದರೆ ಪಡಿಕ್ಕಲ್ 118 ಎಸೆತಗಳಲ್ಲಿ 10 ಬೌಂಡರಿ ಮತ್ತು 7 ಸಿಕ್ಸರ್ ಒಳಗೊಂಡ 147 ರನ್ ಚಚ್ಚಿದರು.

ಇವರಿಬ್ಬರು ನಿರ್ಗಮಿಸಿದ ನಂತರ ಕರುಣ್ ನಾಯರ್ (29) ಮತ್ತು ಸಮ್ರನ್ (27) ಮತ್ತು ಕೃಷ್ಣನ್ (38) ದೊಡ್ಡ ಮೊತ್ತ ಗಳಿಸಲು ವಿಫಲರಾದರು. ಕೊನೆಯಲ್ಲಿ ಅಭಿನವ್ ಮನೋಹರ್ (56 ರನ್, 32 ಎಸೆತ, 8 ಬೌಂಡರಿ, 1 ಸಿಕ್ಸರ್) ಮತ್ತು ಧ್ರುವ ಪ್ರಭಾಕರ್ (40 ರನ್, 22 ಎಸೆತ, 6 ಬೌಂಡರಿ, 1 ಸಿಕ್ಸರ್)

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಜಾರ್ಖಂಡ್ ತಂಡ ನಿಯಮಿತವಾಗಿ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಇಶಾನ್ ಕಿಶನ್ 32 ಎಸೆತಗಳಲ್ಲಿ ಶತಕ ಪೂರೈಸಿ ಅತ್ಯಂತ ವೇಗದ ಶತಕದ ದಾಖಲೆ ಬರೆದಿದ್ದೂ ಅಲ್ಲದೇ 39 ಎಸೆತಗಳಲ್ಲಿ 7 ಬೌಂಡರಿ ಮತ್ತು 14 ಸಿಕ್ಸರ್ ಸಹಾಯದಿಂದ 125 ರನ್ ಚಚ್ಚಿ ತಂಡದ ಮೊತ್ತವನ್ನು 400ರ ಗಡಿ ದಾಟಿಸಿದರು.

ವಿರಾಟ್ ಸಿಂಗ್ (88) ಮತ್ತು ಕುಮಾರ್ ಕುಶಾಗ್ರ (63) ಅರ್ಧಶತಕ ಬಾರಿಸಿ ತಂಡವನ್ನು ಆಧರಿಸಿದರು. ಕರ್ನಾಟಕದ ಪರ ಅಭಿಲಾಷ್ ಶೆಟ್ಟಿ 4 ವಿಕೆಟ್ ಪಡೆದು ಗಮನ ಸೆಳೆದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment