ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 2 ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದ ಮನು ಭಾಕರ್, 18 ವರ್ಷಕ್ಕೆ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಅಲಂಕರಿಸಿದ ಡಿ ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾಪಟುಗಳನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಹಿಳಾ ಶೂಟರ್ ಮನು ಭಾಕರ್, ಚೆಸ್ ಪಟು ಡಿ. ಗುಕೇಶ್, ಭಾರತ ಪುರುಷರ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಚಿನ್ನದ ಪದಕ ವಿಜೇತ ಪ್ರವೀಣ್ ಕುಮಾರ್ ಅವರಿಗೆ ೨೦೨೪ನೇ ಸಾಲಿನಲ್ಲಿ ತೋರಿದ ಅತ್ಯುತ್ತಮ ಸಾಧನೆಗೆ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಿಶೇಷವಾಗಿ ಆಯೋಜಿಸಲಾಗುವ ಸಮಾರಂಭದಲ್ಲಿ ಈ ನಾಲ್ವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ಪ್ಯಾರಾಲಿಂಪಿಕ್ಸ್ ನಲ್ಲಿ ಪ್ರವೀಣ್ ಕುಮಾರ್ ಹೈಜಂಪ್ ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರೆ, ಹಾಕಿ ತಂಡ ಸತತ ಎರಡನೇ ಬಾರಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದು, ತಂಡವನ್ನು ಮುನ್ನಡೆಸಿದ ಹರ್ಮನ್ ಪ್ರೀತ್ ಗೆ ಖೇಲ್ ರತ್ನ ಒಲಿದಿದೆ.