Friday, November 7, 2025
Google search engine
Homeಕ್ರೀಡೆಇಂಗ್ಲೆಂಡ್ ಅಭ್ಯಾಸದಲ್ಲಿ ಕೆಎಲ್ ರಾಹುಲ್ ಶತಕದ ಮಿಂಚು

ಇಂಗ್ಲೆಂಡ್ ಅಭ್ಯಾಸದಲ್ಲಿ ಕೆಎಲ್ ರಾಹುಲ್ ಶತಕದ ಮಿಂಚು

ಕರ್ನಾಟಕದ ಸ್ಟಾರ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಇಂಗ್ಲೆಂಡ್ ಲಯನ್ಸ್ ವಿರುದ್ಧದ 4 ದಿನಗಳ ಅಭ್ಯಾಸ ಪಂದ್ಯದಲ್ಲಿ ಶತಕ ಸಿಡಿಸಿ ಗಮನ ಸೆಳೆದಿದ್ದಾರೆ.

ನಾರ್ಥ್ ಹ್ಯಾಂಪ್ಟನ್ ನಲ್ಲಿ ಶುಕ್ರವಾರ ಆರಂಭಗೊಂಡ ಎರಡನೇ ಹಾಗೂ ಅಂತಿಮ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ 6 ವಿಕೆಟ್ ಕಳೆದುಕೊಂಡು 281 ರನ್ ಕಲೆ ಹಾಕಿದೆ.

ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ 168 ಎಸೆತಗಳಲ್ಲಿ 15 ಎಸೆತಗಳಲ್ಲಿ 1 ಸಿಕ್ಸರ್ ಸೇರಿ 116 ರನ್ ಗಳಿಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್ ಗೆ ಮರಳುವ ಸೂಚನೆ ನೀಡಿದ್ದಾರೆ.

ಮೊದಲ ಅಭ್ಯಾಸ ಪಂದ್ಯದಲ್ಲಿ ದ್ವಿಶತಕ ಸಿಡಿಸಿ ಗಮನ ಸೆಳೆದಿದ್ದ ಕರ್ನಾಟಕದ ಮತ್ತೊಬ್ಬ ಬ್ಯಾಟ್ಸ್ ಮನ್ ಕರುಣ್ ನಾಯರ್ 40 ರನ್ ಗಳಿಸಿ ಔಟಾದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments