Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ರಾಜಸ್ಥಾನಕ್ಕೆ ಕುಕ್ಕಿದ ಕಾಕ್: ಕೆಕೆಆರ್ 8 ವಿಕೆಟ್ ಜಯಭೇರಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 34 ವೀಕ್ಷಣೆಗಳು
kkr

ಸ್ಪಿನ್ನರ್ ಗಳ ಮಾರಕ ದಾಳಿ ಹಾಗೂ ಆರಂಭಿಕ ಕ್ವಿಂಟನ್ ಡಿ ಕಾಕ್ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡ 8 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ.

ಗುವಾಹತಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವನ್ನು 20 ಓವರ್ ಗಳಲ್ಲಿ 9 ವಿಕೆಟ್ ಗೆ 151 ರನ್ ಗೆ ನಿಯಂತ್ರಿಸಿದ ಕೆಕೆಆರ್ 17.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ರಾಜಸ್ಥಾನ್ ರಾಯಲ್ಸ್ ಗೆ ಇದು ಸತತ 2ನೇ ಸೋಲಾಗಿದೆ.

ಸುಲಭ ಗುರಿ ಬೆಂಬತ್ತಿದ ಕೆಕೆಆರ್ ತಂಡ ಮೊಯಿನ್ ಅಲಿಯನ್ನು (5) ಬೇಗನೇ ಕಳೆದುಕೊಂಡಿತು. ಆದರೆ ಫಾರ್ಮ್ ನಲ್ಲಿರುವ ಕ್ವಿಂಟನ್ ಡಿ ಕಾಕ್ 61 ಎಸೆತಗಳಲ್ಲಿ 8 ಬೌಂಡರಿ ಮತ್ತು 6 ಸಿಕ್ಸರ್ ಒಳಗೊಂಡ 97 ರನ್ ಬಾರಿಸಿ ಔಟಾಗದೇ ಉಳಿಯುವ ಮೂಲಕ ತಂಡಕ್ಕೆ ಸುಲಭ ಗೆಲುವು ತಂದುಕೊಟ್ಟರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಪಿಚ್ ಅರಿತುಕೊಳ್ಳುವ ಮುನ್ನವೇ ಹೊಡಿಬಡಿ ಆಟಕ್ಕೆ ಮುಂದಾಗಿ ವಿಕೆಟ್ ಕೈಚೆಲ್ಲಿದರು. ಇದರಿಂದ ಬೃಹತ್ ಮೊತ್ತ ಕಲೆಹಾಕುವ ಅವಕಾಶ ಕಳೆದುಕೊಂಡಿತು.

ಮಧ್ಯಮ ಕ್ರಮಾಂಕದಲ್ಲಿ ಧ್ರುವ ಜುರೆಲ್ (33), ಯಶಸ್ವಿ ಜೈಸ್ವಾಲ್ (29), ನಾಯಕ ರಿಯಾನ್ ಪರಾಗ್ (25) ಮಾತ್ರ ಹೋರಾಟ ನಡೆಸಿದರು. ಕೆಕೆಆರ್ ಪರ ವರುಣ್ ಚಕ್ರವರ್ತಿ, ಮೊಯಿನ್ ಅಲಿ, ಹರ್ಷಿತ್ ರಾಣಾ, ವೈಭವ್ ಅರೋರಾ ತಲಾ 2 ವಿಕೆಟ್ ಪಡೆದು ಮಿಂಚಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment