Monday, 16 November 2026 — Kannadavahini
BREAKING NEWS
ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ
ಕ್ರೀಡೆ

IPL: ಕೊಹ್ಲಿ, ದೇವದತ್‌ ಆರ್ಭಟ: ಆರ್‌ ಸಿಬಿ 6 ವಿಕೆಟ್‌ ಜಯಭೇರಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 26 ವೀಕ್ಷಣೆಗಳು
virat kohli

ಹಾಲಿ ಚಾಂಪಿಯನ್‌ ಆರ್‌ ಸಿಬಿ ತಂಡ ವಿರಟ್‌ ಕೊಹ್ಲಿ ಮತ್ತು ದೇವದತ್‌ ಪಡಿಕ್ಕಲರ್‌ ಅವರ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ 6 ವಿಕೆಟ್‌ ಜಯಭೇರಿಯೊಂದಿಗೆ ಐಪಿಎಲ್‌ ಟಿ-೨೦ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಕಳೆದ ವರ್ಷ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಅಭಿಮಾನಿಗಳು ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಸಾಕಷ್ಟು ಅಳೆದು ತೂಗಿ ಅನುಮತಿ ಪಡೆದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ 2026 ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿಗೆ 202 ರನ್ ಗಳ ಸವಾಲೊಡ್ಡಿತು. ಕಠಿಣ ಗುರಿ ಬೆಂಬತ್ತಿದ ಆರ್‌ ಸಿಬಿ 15.4 ಓವರ್‌ ಗಳಲ್ಲಿ 4 ವಿಕೆಟ್‌ ಕಳೆದುಕೊಂಡು ಜಯಭೇರಿ ಬಾರಿಸಿತು.

ವಿರಾಟ್‌ ಕೊಹ್ಲಿ ಮತ್ತು ದೇವದತ್‌ ಪಡಿಕ್ಕಲ್‌ ಎರಡನೇ ವಿಕೆಟ್‌ ಗೆ 111 ರನ್‌ ಜೊತೆಯಾಟ ನಿಭಾಯಿಸಿದರು. ಕೊಹ್ಲಿ 38 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ ಒಳಗೊಂಡ 69 ರನ್‌ ಬಾರಿಸಿ ಔಟಾಗದೇ ಉಳಿದರೆ, ದೇವದತ್‌ ಪಡಿಕ್ಕಲ್‌ 26 ಎಸೆತಗಳಲ್ಲಿ 7 ಬೌಂಡರಿ ಮತ್ತು ೪ ಸಿಕ್ಸರ್‌ ಒಳಗೊಂಡ 61 ರನ್‌ ಚಚ್ಚಿದರು. ನಾಯಕ ರಜತ್‌ ಪಟಿದಾರ್‌ 12 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್‌ ಸಹಾಯದಿಂದ 31 ರನ್‌ ಗಳಿಸಿದರೆ ಡೇವಿಡ್‌ ಅಜೇಯ 16 ರನ್‌ ಗಳಿಸಿದರು.

ಇಶಾನ್‌ ಕಿಶನ್‌ ಮಿಂಚು

ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಸನ್ ರೈಸರ್ಸ್ ಹೈದರಾಬಾದ್ ತಂಡ ಸತತವಾಗಿ ವಿಕೆಟ್ ಕಳೆದುಕೊಂಡರೂ ಆರಂಭಿಕ ಇಶಾನ್ ಕಿಶನ್ ಅವರ ಸ್ಫೋಟಕ ಆಟದಿಂದ ಬೃಹತ್ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು.

ಜೇಕಬ್ ಡುವಿ ಮಾರಕ ದಾಳಿಗೆ ತತ್ತರಿಸಿದ ಎಸ್ ಆರ್ ಎಚ್ 29 ರನ್ ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಇಶಾನ್ ಕಿಶನ್ 38 ಎಸೆತಗಳಲ್ಲಿ 8 ಬೌಂಡರಿ ಮತ್ತು 5 ಸಿಕ್ಸರ್ ನೆರವಿನಿಂದ 80 ರನ್ ಪೇರಿಸಿದರು.

ಇದೇ ಮೊದಲ ಬಾರಿ ಆರ್ ಸಿಬಿ ಪರ ಆಡಿದ ಜೇಕಬ್ ಡುವಿ 3 ವಿಕೆಟ್ ಪಡೆದು ಉತ್ತಮ ಆರಂಭ ನೀಡಿದರು. ರೊಮಾರಿಯೊ ಶೆಫಾರ್ಡ್ 3 ವಿಕೆಟ್ ಪಡೆದು ಉತ್ತಮ ಬೆಂಬಲ ನೀಡಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್ ಕ್ಲಾಸೆನ್ (31) ಮತ್ತು ಅನಿಕೇತ್ ವರ್ಮಾ (43) ರನ್ ಸಿಡಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.

ಇಶಾನ್ ಮತ್ತು ಕ್ಲಾಸೆನ್ 4ನೇ ವಿಕೆಟ್ ಗೆ 97 ರನ್ ಜೊತೆಯಾಟದಿಂದ ತಂಡವನ್ನು ಉತ್ತಮ ಸ್ಥಿತಿಗೆ ತಲುಪಿಸಿದರು. ಕೊನೆಯಲ್ಲಿ ಅನಿಕೇತ್ ವರ್ಮಾ 18 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 43 ರನ್ ಸಿಡಿಸಿ ಮಿಂಚಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8418 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment