ಒಲಿಂಪಿಕ್ಸ್ ನಲ್ಲಿ ಡಬಲ್ ಪದಕದ ಸಾಧನೆ ಮಾಡಿರುವ ಭಾರತದ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ ಸದ್ದು ಗದ್ದಲವಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ನೀರಜ್ ಚೋಪ್ರಾ ಹಿಮಾನಿ ಅವರನ್ನು ಅದ್ಧೂರಿ ಕಾರ್ಯಕ್ರಮದಲ್ಲಿ ವರಿಸಿದ್ದು, ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಮದುವೆ ಫೋಟೊ ಬಿಡುಗಡೆ ಮಾಡಿದ್ದಾರೆ.
ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಅಭಿನಂದಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ನೀರಜ್ ಚೋಪ್ರಾ ಪೋಸ್ಟ್ ನಲ್ಲಿ ಧನ್ಯವಾದ ತಿಳಿಸಿದ್ದಾರೆ. ಆದರೆ ಮದುವೆ ವಿವರಗಳನ್ನು ನೀರಜ್ ಚೋಪ್ರಾ ಗೌಪ್ಯವಾಗಿ ಇರಿಸಿದ್ದು, ಮದುವೆ ಆದ ಪತ್ನಿಯ ವಿವರಗಳನ್ನು ಬಹಿರಂಗಪಡಿಸಿಲ್ಲ.
ನೀರಜ್ ಚೋಪ್ರಾ ಒಲಿಂಪಿಕ್ಸ್ ನ ಟ್ರ್ಯಾಕ್ ಅಂಡ್ ಫೀಲ್ಡ್ ವಿಭಾಗದಲ್ಲಿ ಎರಡು ಪದಕ ಗೆದ್ದ ಮೊದಲ ಅಥ್ಲೀಟ್ ಆಗಿದ್ದಾರೆ. ಚಿನ್ನದ ಪದಕ ಗೆದ್ದ ಮೊದಲಿಗ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.