Tuesday, 17 November 2026 — Kannadavahini
BREAKING NEWS
ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ
ಕ್ರೀಡೆ

ಪಂಜಾಬ್ ಪಂಚ್: ಲಕ್ನೋಗೆ 8 ವಿಕೆಟ್ ಹೀನಾಯ ಸೋಲು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 30 ವೀಕ್ಷಣೆಗಳು
asrhadeep

ಸಂಘಟಿತ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡ 8 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.

ಲಕ್ನೋದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 20 ಓವರ್ ಗಳಲ್ಲಿ 7 ವಿಕೆಟ್ ಗೆ 171 ರನ್ ಗಳಿಗೆ ನಿಯಂತ್ರಿಸಿದ ಪಂಜಾಬ್ ಕಿಂಗ್ಸ್ 16.2 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ಸತತ ಎರಡನೇ ಸ್ಥಾನಕ್ಕೇರಿದರೆ, ಆರ್ ಸಿಬಿ ಅಗ್ರಸ್ಥಾನದಲ್ಲಿದೆ.

ಪಂಜಾಬ್ ತಂಡಕ್ಕೆ ಪ್ರಭ್ ಸಿಮ್ರನ್ ಮತ್ತು ನಾಯಕ ಶ್ರೇಯಸ್ ಅಯ್ಯರ್ ಅರ್ಧಶತಕಗಳನ್ನು ಬಾರಿಸಿದ್ದೂ ಅಲ್ಲದೇ ಎರಡನೇ ವಿಕೆಟ್ ಗೆ 84 ರನ್ ಜೊತೆಯಾಟದಿಂದ ತಂಡವನ್ನು ಆಧರಿಸಿದರು. ಪ್ರಭ್ ಸಿಮ್ರನ್ 34 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 69 ರನ್ ಚಚ್ಚಿದರೆ, ಅಯ್ಯರ್ 30 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್ ಸಹಾಯದಿಂದ 52 ರನ್ ಸಿಡಿಸಿದರು.

ನೆಹಲ್ ವಧೇರ 25 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 43 ರನ್ ಬಾರಿಸಿ ಔಟಾಗದೇ ಉಳಿದಿದ್ದೂ ಅಲ್ಲದೇ ಮೂರನೇ ವಿಕೆಟ್ ಗೆ ನಾಯಕ ಅಯ್ಯರ್ ಜೊತೆ 67 ರನ್ ಜೊತೆಯಾಟದಿಂದ ತಂಡದ ಗೆಲುವಿಗೆ ಉತ್ತಮ ಕಾಣಿಕೆ ನೀಡಿದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಲಕ್ನೋ ಮಧ್ಯಮ ವೇಗಿ ಅರ್ಷದೀಪ್ ಸಿಂಗ್ ನೇತೃತ್ವದ ದಾಳಿಗೆ ನಿಯಮಿತವಾಗಿ ವಿಕೆಟ್ ಕಳೆದುಕೊಂಡು ಬೃಹತ್ ಪೇರಿಸುವ ಅವಕಾಶದಿಂದ ವಂಚಿತವಾಯಿತು.

ಮಧ್ಯಮ ಕ್ರಮಾಂಕದಲ್ಲಿ ನಿಕೊಲಸ್ ಪೂರನ್ (44), ಆಯುಷ್ ಬದೋನಿ (41), ಅಬ್ದುಲ್ ಸಮದ್ (27), ಡೇವಿಡ್ ಮಿಲ್ಲರ್ (19) ಉತ್ತಮ ಮೊತ್ತ ಪೇರಿಸಲು ನಡೆಸಿದ ಹೋರಾಟ ವಿಫಲವಾಯಿತು. ಅರ್ಷದೀಪ್ 3 ವಿಕೆಟ್ ಪಡೆದು ಮಿಂಚಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8422 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment