ಪಂಜಾಬ್ ಕಿಂಗ್ಸ್ ತಂಡ ಬೆಂಗಳೂರಿನಲ್ಲಿ ನಡೆದ ಐಪಿಎಲ್ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದು ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟ್ ಮಾಡುವಂತೆ ಆಹ್ವಾನಿಸಿದೆ.
ಬೆಂಗಳೂರಿನಲ್ಲಿ ಗುರುವಾರ ಸುರಿದ ಭಾರೀ ಮಳೆಯಿಂದಾಗಿ 14 ಓವರ್ ಗಳಿಗೆ ಕಡಿತಗೊಂಡ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರನ್ ಗಳಿಸಲು ಕಷ್ಟ ಹಾಗೂ ಮಳೆಯಿಂದ ಪಿಚ್ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಅಲ್ಲದೇ ಪಂದ್ಯದ ಓವರ್ ಕಡಿತಗೊಂಡಿರುವ ಕಾರಣ ರನ್ ಚೇಸ್ ಮಾಡಲು ನಿರ್ಧರಿಸಿದ್ದಾಗಿ ಶ್ರೇಯಸ್ ಹೇಳಿದರು.
ಬೆಂಗಳೂರಿನಲ್ಲಿ ಆರ್ ಸಿಬಿ ವಿರುದ್ಧದ ಪಂದ್ಯಕ್ಕೆ ಆರ್ ಸಿಬಿ ಮಾಜಿ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಅವರನ್ನು ಕೈಬಿಡಲಾಗಿದ್ದು, ಮಾರ್ಕೊಸ್ ಸ್ಟೋನಿಸಿಸ್ ಪಂಜಾಬ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆರ್ ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.


