Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

IPL 2026: ಸಂಜು ಸ್ಯಾಮ್ಸನ್ ಸಿಎಸ್ ಕೆಗೆ, ರಾಜಸ್ಥಾನ್ ಗೆ ಜಡೇಜಾ?

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 30 ವೀಕ್ಷಣೆಗಳು
ravindra jadeja -sanju samson

ಎರಡೂ ತಂಡಗಳ ಫೇವರಿಟ್ ಆಟಗಾರರನ್ನೇ ಫ್ರಾಂಚೈಸಿಗಳು ಬಿಟ್ಟುಕೊಡಲು ಮುಂದಾಗಿದ್ದು, ಇದಕ್ಕಾಗಿ ಎರಡೂ ಫ್ರಾಂಚೈಸಿ ಪ್ರಮುಖ ಆಟಗಾರರನ್ನು ಅದಲು ಬದಲು ಮಾಡಿಕೊಳ್ಳಲು ಮುಂದಾಗಿವೆ.

ರಾಜಸ್ಥಾನ್ ರಾಯಲ್ಸ್ ತಂಡದ ಫೇವರಿಟ್ ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಗೆ ಬಿಟ್ಟುಕೊಟ್ಟು ಆ ತಂಡದ ಪ್ರಮುಖ ಆಲ್ ರೌಂಡರ್ ಆಗಿರುವ ರವೀಂದ್ರ ಜಡೇಜಾ ಅವರನ್ನು ಕರೆದುಕೊಳ್ಳುವ ಸಾಧ್ಯತೆ ಇದೆ.

ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಲಾ ಮೂವರು ಆಟಗಾರರನ್ನು ಅದಲು ಬದಲು ಮಾಡಿಕೊಳ್ಳಲು ಮುಂದಾಗಿವೆ ಎಂದು ಹೇಳಲಾಗಿದೆ. ಐಪಿಎಲ್ ನಿಯಮಗಳ ಪ್ರಕಾರ ಹರಾಜಿಗೆ ಮುನ್ನ ಆಟಗಾರರನ್ನು ಬದಲಾಯಿಸಿಕಿಕೊಳ್ಳಲು ಅವಕಾಶವಿದೆ.

ಸಂಜು ಸ್ಯಾಮ್ಸನ್ ಮತ್ತು ರವೀಂದ್ರ ಜಡೇಜಾ 11 ವರ್ಷಗಳಿಂದ ತಮ್ಮ ತಂಡಗಳನ್ನು ಪ್ರತಿನಿಧಿಸುತ್ತಿದ್ದಾರೆ. ಈ ಮೂಲಕ ಇಬ್ಬರೂ ಆಟಗಾರರು ತಮ್ಮ ನೆಚ್ಚಿನ ತಂಡಗಳನ್ನು ತೊರೆಯಲು ಮುಂದಾಗಿದ್ದಾರೆ. ಇದೇ ವೇಳೆ ಚೆನ್ನೈ ತಂಡದಿಂದ ಸ್ಯಾಮ್ ಕುರಾನ್ ಅವರನ್ನು ಸೆಳೆದುಕೊಳ್ಳಲು ರಾಜಸ್ಥಾನ್ ರಾಯಲ್ಸ್ ಪ್ರಯತ್ನ ನಡೆಸಿದೆ ಎಂದು ಹೇಳಲಾಗಿದೆ.

ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹಾಗೂ ಜಡೇಜಾ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 2012ರಿಂದ ಪ್ರತಿನಿಧಿಸುತ್ತಿದ್ದಾರೆ. ಎರಡೂ ತಂಡಗಳು ಮ್ಯಾಚ್ ಫಿಕ್ಸಿಂಗ್ ಕಾರಣ 2 ವರ್ಷ (2016-17) ನಿಷೇಧಕ್ಕೆ ಒಳಗಾಗಿದ್ದವು. ಈ ಎರಡೂ ವರ್ಷ ತಂಡವನ್ನು ಇಬ್ಬರೂ ಪ್ರತಿನಿಧಿಸಿರಲಿಲ್ಲ.

ಜಡೇಜಾ 19 ವರ್ಷದ ಹುಡುಗನಿದ್ದಾಗ ಮೊದಲ ಬಾರಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದರು. ಇದೀಗ ಸಿಎಸ್ ಕೆ ತಂಡದ ಅವಿಭಾಜ್ಯ ಅಂಗವಾಗಿದ್ದು, 254 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ. 2023ರಲ್ಲಿ ತಂಡ ಫೈನಲು ತಲುಪಲು ಪ್ರಮುಖ ಪಾತ್ರ ವಹಿಸಿದ್ದು, ನಾಯಕತ್ವವನ್ನು ಕೂಡ ಪಡೆದಿದ್ದರು. ಆದರೆ ಕೆಲವೇ ಪಂದ್ಯಗಳ ನಂತರ ನಾಯಕತ್ವ ತೊರೆದಿದ್ದರು.

2025ರ ನಂತರ ಸಂಜು ಸ್ಯಾಮ್ಸನ್ ಬದಲಾವಣೆಗಾಗಿ ತಂಡವನ್ನು ತೊರೆಯುವ ಸುಳಿವು ನೀಡಿದ್ದರು. 67 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿರುವ ಸಂಜು ಸ್ಯಾಮ್ಸನ್ 33 ಗೆಲುವು, 33 ಸೋಲು ಕಂಡಿದ್ದಾರೆ. ಕಳೆದ ವರ್ಷ 18 ಕೋಟಿಗೆ ರಾಜಸ್ಥಾನ್ ತಂಡಕ್ಕೆ ಮಾರಾಟವಾಗಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment