ಮಳೆಯ ಕಾರಣ ಬೆಂಗಳೂರಿನಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಣ ಐಪಿಎಲ್ ಪಂದ್ಯ ಲಕ್ನೋಗೆ ಸ್ಥಳಾಂತರಿಸಲಾಗಿದೆ.
ಮೇ 23ರಂದು ನಡೆಯಬೇಕಿದ್ದ ಬೆಂಗಳೂರಿನ ಪಂದ್ಯವನ್ನು ಮಳೆಯ ಕಾರಣ ಲಕ್ನೋಗೆ ಸ್ಥಳಾಂತರಿಸಲಾಗಿದೆ.
ಮೇ 24ರವರೆಗೆ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಉಳಿದ ಏಕೈಕ ಪಂದ್ಯ ಕೂಡ ಲಕ್ನೋಗೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
ಮೇ 17ರಂದು ನಡೆಯಬೇಕಿದ್ದ ಆರ್ ಸಿಬಿ ಮತ್ತು ಕೆಕೆಆರ್ ಪಂದ್ಯ ಮಳೆಯಿಂದ ಒಂದೂ ಎಸೆತ ಕಾಣದೇ ರದ್ದುಗೊಂಡಿತ್ತು. ಇದೀಗ ತವರಿನ ಕೊನೆಯ ಪಂದ್ಯ ಕೂಡ ಬೆಂಗಳೂರು ಕೈ ತಪ್ಪಿದಂತಾಗಿದೆ.
ಇದೇ ವೇಳೆ ಜೂನ್ 3ರಂದು ನಡೆಯಲಿರುವ ಐಪಿಎಲ್ ಟಿ-20 ಫೈನಲ್ ಪಂದ್ಯ ಅಹಮದಾಬಾದ್ ನಲ್ಲಿ ನಡೆಯಲು ತೀರ್ಮಾನಿಸಲಾಗಿದೆ. ಈ ಹಿಂದೆ ಕೋಲ್ಕತಾದಲ್ಲಿ ಫೈನಲ್ ಪಂದ್ಯ ನಡೆಯುತ್ತದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಅಹಮದಾಬಾದ್ ನ ಜಗತ್ತಿನ ಅತೀ ದೊಡ್ಡ ಮೈದಾನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.


