Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಕೊಹ್ಲಿ-ಕೃನಾಲ್ ಅಮೋಘ ಆಟ: ಡೆಲ್ಲಿ ವಿರುದ್ಧ ಬೆಂಗಳೂರಿನ ಸೋಲಿಗೆ ಸೇಡು ತೀರಿಸಿಕೊಂಡ ಆರ್ ಸಿಬಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 29 ವೀಕ್ಷಣೆಗಳು

ದಾಖಲೆಗಳ ವೀರ ವಿರಾಟ್ ಕೊಹ್ಲಿ ಮತ್ತು ಆಲ್ ರೌಂಡರ್ ಕೃನಾಲ್ ಪಾಂಡ್ಯ ಅಮೋಘ ಜೊತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿತು.

ಬೆಂಗಳೂರಿನಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳುವ ಮೂಲಕ ಆರ್ ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ದೆಹಲಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಗೆ 163 ರನ್ ಸಂಪಾದಿಸಿತು. ಬೌಲರ್ ಗಳಿಗೆ ನೆರವಾಗುತ್ತಿದ್ದ ಪಿಚ್ ನಲ್ಲಿ ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಆರ್ ಸಿಬಿ 18.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಆರ್ ಸಿಬಿ 10 ಪಂದ್ಯಗಳಿಂದ 7 ಜಯ ಹಾಗೂ 3 ಸೋಲಿನೊಂದಿಗೆ 14 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಲಗ್ಗೆ ಹಾಕಿದ್ದೂ ಅಲ್ಲದೇ ಪ್ಲೇಆಫ್ ಗೆ ಅತೀ ಸಮೀಪ ತಲುಪಿತು. ಡೆಲ್ಲಿ ಕ್ಯಾಪಿಟಲ್ಸ್ 9 ಪಂದ್ಯಗಳಲ್ಲಿ 6 ಜಯ ಹಾಗೂ 3 ಸೋಲಿನೊಂದಿಗೆ 12 ಅಂಕದೊಂದಿಗೆ 4ನೇ ಸ್ಥಾನದಲ್ಲಿ ಉಳಿದುಕೊಂಡಿತು.

ಆರ್ ಸಿಬಿ ಒಂದು ಹಂತದಲ್ಲಿ ಆರ್ ಸಿಬಿ ಸ್ಪಿನ್ನರ್ ಅಕ್ಸರ್ ಪಟೇಲ್ ದಾಳಿಗೆ ತತ್ತರಿಸಿ 26 ರನ್ ಗೆ 3 ವಿಕೆಟ್ ಕಳೆದುಕೊಂಡು ಶೋಚನೀಯ ಸ್ಥಿತಿ ತಲುಪಿತು. ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಮತ್ತು ಕೃನಾಲ್ ಪಾಂಡ್ಯ 119 ರನ್ ಜೊತೆಯಾಟ ನಿಭಾಯಿಸಿ ರೋಚಕ ಗೆಲುವು ತಂದುಕೊಟ್ಟರು.

ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ ಸೇರಿದ 51 ರನ್ ಬಾರಿಸಿ ಔಟಾದರೆ, ಕೃನಾಲ್ ಪಾಂಡ್ಯ 47 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ ನೊಂದಿಗೆ ಅಜೇಯ 73 ರನ್ ಸಿಡಿಸಿದರು. ಕೊನೆಯಲ್ಲಿ ಟಿಮ್ ಡೇವಿಡ್ 5 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸಿಡಿಸಿ ಗೆಲುವಿನ ಔಪಚಾರಿಕತೆ ಪೂರೈಸಿದರು.

ಕುಸಿದ ಡೆಲ್ಲಿ
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭುವನೇಶ್ವರ್ ಕುಮಾರ್ ದಾಖಲಿಗೆ ತತ್ತರಿ ಸಾಧಾರಣ ಮೊತ್ತಕ್ಕೆ ಕುಸಿಯಿತು.

ಡೆಲ್ಲಿ ಪರ ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್ 39 ಎಸೆತಗಳಲ್ಲಿ 3 ಬೌಂಡರಿ ಸೇರಿದ 41 ರನ್ ಬಾರಿಸಿ ಭುವನೇಶ್ವರ್ ಗೆ ವಿಕೆಟ್ ಒಪ್ಪಿಸಿದರು. ಟ್ರಿಸ್ಟನ್ ಸ್ಟಬ್ಸ್ 18 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 34 ರನ್ ಬಾರಿಸಿ ತಂಡದ ಮೊತ್ತ 150ರ ಗಡಿ ದಾಟಿಸಿದರು.

ಉಳಿದಂತೆ ಅಭಿಷೇಕ್ ಪೂರಲ್ (28), ಫಾಫ್ ಡು ಪ್ಲೆಸಿಸ್ (22), ನಾಯಕ ಅಕ್ಸರ್ ಪಟೇಲ್ (15), ವಿಪ್ರಾಜ್ ನಿಗಮ್ (12) ಹೋರಾಟ ನಡೆಸಿದರು. ಆರ್ ಸಿಬಿ ಪರ ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದರೆ, ಜೋಸ್ ಹಾಜ್ಲೆವುಡ್ 2 ವಿಕೆಟ್ ಗಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment