ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಚಾಂಪಿಯನ್ ಆಗೊ ಹೊರಹೊಮ್ಮಿದೆ. ಈ ಮೂಲಕ 18 ವರ್ಷಗಳ ಅಭಿಮಾನಿಗಳ ಕನಸು ನನಸಾಗಿದೆ.
ಅಹಮದಾಬಾದ್ ನಲ್ಲಿ ಮಂಗಳವಾರ ನಡೆದ ಫೈನಲ್ ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 190 ರನ್ ಪೇರಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಪಂಜಾಬ್ ಕಿಂಗ್ಸ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 160 ರನ್ ಗಳಿಸಲಷ್ಟೇ ಶಕ್ತವಾಯಿತು.
ಶಶಾಂಕ್ ಕೊನೆಯ ಎರಡು ಎಸೆತಗಳಲ್ಲಿ ಸತತ ಸಿಕ್ಸರ್ ಬಾರಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಯ ಓವರ್ ನಲ್ಲಿ 19 ರನ್ ಬೇಕಾಗಿತ್ತು ಜೋಸ್ ಹಾಜೆಲವುಡ್ ಮೊದಲೆರಡು ಎಸೆತಗಳಲ್ಲಿ ರನ್ ನಿಡದೇ ಡಾಲ್ ಬಾಲ್ ಮಾಡಿ ಗೆಲುವು ಖಚಿತಪಡಿಸಿದರು. ನಂತರ ಶಶಾಂಕ್ 1 ಬೌಂಡರಿ, 3 ಸಿಕ್ಸರ್ ಬಾರಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.
ಪಂಜಾಬ್ ಕಿಂಗ್ಸ್ 6 ರನ್ ನಿಂದ ಸೋಲುಂಡಿತು.ಈ ಮೂಲಕ ಎರಡನೇ ಬಾರಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿ ಪಡೆಯಿತು.
ಆರ್ ಸಿಬಿ ತಂಡ ನಾಲ್ಕನೇ ಪ್ರಯತ್ನದಲ್ಲಿ ಐಪಿಎಲ್ ಗೆ ಮೊದಲ ಬಾರಿ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಮೂಲಕ ರಜತ್ ಪಡಿದಾರ್ ಮೊದಲ ಬಾರಿ ನಾಯಕತ್ವದಲ್ಲೇ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದರು.


