Thursday, December 25, 2025
Google search engine
Homeಕ್ರೀಡೆ7 ವರ್ಷದಲ್ಲೇ ಮುರಿದುಬಿದ್ದ ಬ್ಯಾಡ್ಮಿಂಟನ್ ಸ್ಟಾರ್ ಸೈನಾ- ಕಶ್ಯಪ್ ದಾಂಪತ್ಯ

7 ವರ್ಷದಲ್ಲೇ ಮುರಿದುಬಿದ್ದ ಬ್ಯಾಡ್ಮಿಂಟನ್ ಸ್ಟಾರ್ ಸೈನಾ- ಕಶ್ಯಪ್ ದಾಂಪತ್ಯ

ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸೈನಾ ನೆಹವಾಲ್‌ ಮತ್ತು ಪಾರುಪಳ್ಳಿ ಕಶ್ಯಪ್ ದಾಂಪತ್ಯ 7 ವರ್ಷಗಳ ನಂತರ ಮುರಿದುಬಿದ್ದಿದೆ.

35 ವರ್ಷ ವಯಸ್ಸಿನ ಸೈನಾ ನೆಹವಾಲ್ ಸಾಮಾಜಿಕ ಜಾಲತಾಣದಲ್ಲಿ ವಿಚ್ಛೇದನದ ವಿಷಯವನ್ನು ಅಧಿಕೃತವಾಗಿ ಪ್ರಕಟಿಸುವ ಮೂಲಕ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾಗಿ ಘೋಷಿಸಿದ್ದಾರೆ.

ಬಾಲ್ಯದ ಗೆಳೆಯ ಹಾಗೂ ಸಹ ಆಟಗಾರನಾಗಿದ್ದ ಪಾರುಪಳ್ಳಿ ಕಶ್ಯಪ್ ಮತ್ತು ಸೈನಾ ನೆಹವಾಲ್ 2018 ಡಿಸೆಂಬರ್ ನಲ್ಲಿ ದಾಂಪತ್ಯಕ್ಕೆ ಕಾಲಿರಿಸಿದ್ದರು. ಹೊಂದಾಣಿಕೆ ಕೊರತೆ ಸೇರಿದಂತೆ ನಾನಾ ಕಾರಣಗಳಿಗೆ ಬೇರ್ಪಡಲು ನಿರ್ಧರಿಸಿದ್ದಾರೆ. ಈ ಮೂಲಕ ಸುಮಾರು 7 ವರ್ಷಗಳ ದಾಂಪತ್ಯ ಜೀವನಕ್ಕೆ ತೆರೆ ಎಳೆದಿದ್ದಾರೆ.

ಜೀವನವು ಕೆಲವೊಮ್ಮೆ ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಸಾಕಷ್ಟು ಆಲೋಚನೆಯ ನಂತರ ನಾವಿಬ್ಬರು ಬೇರೆಯಾಗಲು ನಿರ್ಧರಿಸಿದ್ದೇವೆ ಎಂದು ಸೈನಾ ನೆಹವಾಲ್ ಬರೆದುಕೊಂಡಿದ್ದಾರೆ.

ನೆನಪುಗಳಿಗೆ ನಾನು ಕೃತಜ್ಞನಾಗಿದ್ದೇನೆ ಮತ್ತು ಮುಂದುವರಿಯಲು ಉತ್ತಮವಾದದ್ದನ್ನು ಮಾತ್ರ ಬಯಸುತ್ತೇನೆ. ಈ ಸಮಯದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ಭಾವಿಸುತ್ತೇನೆ ಎಂದು ಸೈನಾ ಹೇಳಿಕೊಂಡಿದ್ದಾರೆ.

ಸೈನಾ ಬಹಿರಂಗವಾಗಿಯೇ ಈ ನಿರ್ಧಾರ ತಿಳಿಸಿದರೆ ಕಶ್ಯಪ್‌ ಅವರು ಇಲ್ಲಿಯವರೆಗೆ ಯಾವುದೇ ಹೇಳಿಕೆ, ಪೋಸ್ಟ್‌ ಹಾಕಿಕೊಂಡಿಲ್ಲ. ಆದರೆ ವಿದೇಶದಲ್ಲಿ ಸ್ನೇಹಿತರೊಂದಿಗೆ ಇರುವ ಫೋಟೊ ಹಂಚಿಕೊಂಡಿದ್ದಾರೆ.

ನೆಹವಾಲ್ ಒಲಿಂಪಿಕ್ಸ್‌ ಕಂಚಿನ ಪದಕ ಮತ್ತು ವಿಶ್ವದ ನಂ. 1 ಶ್ರೇಯಾಂಕ ಪಡೆದಿದ್ದರೆ ಪರುಪಳ್ಳಿ ಕಶ್ಯಪ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದಿದ್ದರು. ಒಂದು ದಶಕಕ್ಕೂ ಹೆಚ್ಚು ಕಾಲ ಗೆಳೆಯರಾಗಿದ್ದ ಇವರು 2018 ರಲ್ಲಿ ಮದುವೆಯಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments