Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಕುಸಿದ ಆರ್ ಸಿಬಿಗೆ ಸಾಲ್ಟ್, ಡೇವಿಡ್ ಆಸರೆ: ಡೆಲ್ಲಿಗೆ 164 ಗುರಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 29 ವೀಕ್ಷಣೆಗಳು
delhi capitals

ಸ್ಪಿನ್ನರ್ ಗಳ ದಾಳಿಗೆ ತರಗಲೆಯಂತೆ ಉದುರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಟಿಮ್ ಸಾಲ್ಟ್ ಮತ್ತು ಟಿಮ್ ಡೇವಿಡ್ ಅಲ್ಪ ಕಾಣಿಕೆ ಮೂಲಕ ಆಸರೆಯಾದರು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 163 ರನ್ ಕಲೆಹಾಕಿತು.

ಆರ್ ಸಿಬಿಗೆ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ 3 ಓವರ್ ಗಳಲ್ಲಿ 53 ರನ್ ಪೇರಿಸಿ ಸ್ಫೋಟಕ ಆರಂಭ ನೀಡಿದರು. ಆದರೆ ಫಿಲ್ ಸಾಲ್ಟ್ ಇಲ್ಲದ ರನ್ ಕದಿಯುವ ಆತುರದಲ್ಲಿ ವಿಕೆಟ್ ಕಳೆದುಕೊಳ್ಳುತ್ತಿದ್ದಂತೆ ಆರ್ ಸಿಬಿ ನಾಟಕೀಯ ಕುಸಿತ ಅನುಭವಿಸಿತು.

ಮಿಚೆಲ್ ಸ್ಟಾರ್ಕ್ ಅವರ ಒಂದೇ ಓವರ್ ನಲ್ಲಿ ಫಿಲ್ ಸಾಲ್ಟ್ 24 ರನ್ ಸಿಡಿಸಿ ಗಮನ ಸೆಳೆದರು. ರನೌಟ್ ಆಗುವ ಮುನ್ನ ಸಾಲ್ಟ್ 17 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಸೇರಿದಂತೆ 37 ರನ್ ಸಿಡಿಸಿದರು. ಇದರ ಬೆನ್ನಲ್ಲೇ ದೇವದತ್ ಪಡಿಕಲ್ (1), ವಿರಾಟ್ ಕೊಹ್ಲಿ (22), ಲಿಯಾಮ್ ಲಿವಿಂಗ್ ಸ್ಟನ್ (4), ಜಿತೇಶ್ ಶರ್ಮ (3) ಒಬ್ಬರ ಹಿಂದೆ ಒಬ್ಬರು ಪೆವಿಲಿಯನ್ ಪೆರೇಡ್ ನಡೆಸಿದರು.

ಈ ಹಂತದಲ್ಲಿ ಆರ್ ಸಿಬಿ 125 ರನ್ ಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಟಿಮ್ ಡೇವಿಡ್ 20 ಎಸೆತಗಳಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 37 ರನ್ ಸಿಡಿಸಿದರೆ, ಕೃನಾಲ್ ಪಾಂಡ್ಯ 18 ಎಸೆತಗಳಲ್ಲಿ 1 ಬೌಂಡರಿ ಸಹಾಯದಿಂದ 18 ರನ್ ಬಾರಿಸಿ ತಂಡದ ಮೊತ್ತ 150ರ ಗಡಿ ದಾಟಿಸಿದರು.

ಡೆಲ್ಲಿ ಪರ ಕುಲದೀಪ್ ಯಾದವ್ ಮತ್ತು ವಿಪ್ರಾಜ್ ನಿಗಮ್ ತಲಾ 2 ವಿಕೆಟ್ ಪಡೆದು ಮಿಂಚಿದರೆ, ಮುಖೇಶ್ ಕುಮಾರ್ ಮತ್ತು ಮನೋಜ್ ಕುಮಾರ್ ತಲಾ 1 ವಿಕೆಟ್ ಗಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment