ಆಸ್ಟ್ರೇಲಿಯಾದ ಮಧ್ಯಮ ವೇಗಿ ಮಿಚೆಲ್ ಸ್ಟಾರ್ಕ್ ತಮ್ಮ 100ನೇ ಟೆಸ್ಟ್ ಪಂದ್ಯದಲ್ಲಿ ನಡೆಸಿದ ಮಾರಕ ದಾಳಿಗೆ ತತ್ತರಿಸಿದ ವೆಸ್ಟ್ ಇಂಡೀಸ್ 27 ರನ್ ಗೆ ಆಲೌಟಾಗಿದೆ.
ಕಿಂಗ್ ಸ್ಟನ್ ನಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 27 ರನ್ ಗೆ ಆಲೌಟ್ ಮಾಡಿದ ಆಸ್ಟ್ರೇಲಿಯಾ 176 ರನ್ ಗಳಿಂದ ಜಯ ಸಾಧಿಸಿದೆ.
ಮಿಚೆಲ್ ಸ್ಟಾರ್ಕ್ ಮಾರಕ ದಾಳಿಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡದ 7 ಮಂದಿ ಬ್ಯಾಟ್ಸ್ ಮನ್ ಗಳು ಶೂನ್ಯಕ್ಕೆ ಔಟಾದರು. ಮಿಚೆಲ್ ಸ್ಟಾರ್ಕ್ 7.3 ಓವರ್ ಗಳಲ್ಲಿ 9 ರನ್ ನೀಡಿ ಹ್ಯಾಟ್ರಿಕ್ ಸೇರಿದಂತೆ 6 ವಿಕೆಟ್ ಪಡೆದರು. ಅಲ್ಲದೇ 2.3 ಓವರ್ ಗಳಲ್ಲಿ 5 ವಿಕೆಟ್ ಪಡೆದು ವಿಶ್ವದಾಖಲೆ ಬರೆದಿದ್ದಾರೆ.
ಮಿಚೆಲ್ ಸ್ಟಾರ್ಕ್ ಅತ್ಯಂತ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಪಡೆದ ವಿಶ್ವದಾಖಲೆ ಬರೆದರು. ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಎರ್ನಿ ಟೊಶಾಕ್, ಸ್ಕಾಟ್ ಬೋಲ್ಯಾಂಡ್ ಮತ್ತು ಇಂಗ್ಲೆಂಡ್ ತಂಡದ ಸ್ಟುವರ್ಟ್ ಬ್ರಾಡ್ 19 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು.
ಮಿಚೆಲ್ ಸ್ಟಾರ್ಕ್ 100ನೇ ಟೆಸ್ಟ್ ಪಂದ್ಯದಲ್ಲಿ 400 ವಿಕೆಟ್ ಪಡೆದು ಶೇನ್ ವಾರ್ನ್, ಗ್ಲೆನ್ ಮೆಗ್ರಾಥ್ ಮತ್ತು ನಾಥನ್ ಲಿಯೊನ್ ಜೊತೆ ಸ್ಥಾನ ಹಂಚಿಕೊಂಡರು.
ವೆಸ್ಟ್ ಇಂಡೀಸ್ 27 ರನ್ ಗೆ ಆಲೌಟಾದರೂ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಡಿಮೆ ಮೊತ್ತಕ್ಕೆ ಔಟಾದ ಕಳಪೆ ದಾಖಲೆಯನ್ನು ಕೂದಲೆಳೆ ಅಂತರದಿಂದ ತಪ್ಪಿಸಿಕೊಂಡಿತು.


