Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಸಿರಾಜ್-ಅಕ್ಷ್ ದಾಳಿಗೆ ಆಂಗ್ಲರು ಆಲೌಟ್: ಭಾರತಕ್ಕೆ 180 ರನ್ ಭಾರೀ ಮುನ್ನಡೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 32 ವೀಕ್ಷಣೆಗಳು
mohammad siraj

ಮಧ್ಯಮ ವೇಗಿಗಳಾದ ಮೊಹಮದ್ ಸಿರಾಜ್ ಮತ್ತು ಅಕ್ಷ್ ದೀಪ್ ಮಾರಕ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ 407 ರನ್ ಗೆ ಆಲೌಟಾಗಿದೆ. ಇದರೊಂದಿಗೆ ಭಾರತ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 180 ರನ್ ಭಾರೀ ಮುನ್ನಡೆಯೊಂದಿಗೆ ಮೇಲುಗೈ ಸಾಧಿಸಿದೆ.

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಶುಕ್ರವಾರ ಇಂಗ್ಲೆಂಡ್ ತಂಡ ಜೆಮ್ಮಿ ಸ್ಮಿತ್ ಮತ್ತು ಹ್ಯಾರಿ ಬ್ರೂಕ್ ಶತಕಗಳ ಹೊರತಾಗಿಯೂ ಮೊದಲ ಇನಿಂಗ್ಸ್ ನಲ್ಲಿ 89.3 ಓವರ್ ಗಳಲ್ಲಿ 407 ರನ್ ಗೆ ಪತನಗೊಂಡಿತು.

ಭಾರತದ ಪರ ಮಾರಕ ದಾಳಿ ಸಂಘಟಿಸಿದ ಮೊಹಮದ್ ಸಿರಾಜ್ 70 ರನ್ ನೀಡಿ 6 ವಿಕೆಟ್ ಕಬಳಿಸಿದರೆ, ಅಕ್ಷ್ ದೀಪ್ 88 ರನ್ ನೀಡಿ 4 ವಿಕೆಟ್ ಪಡೆದರೆ, ಉಳಿದ ಯಾವುದೇ ಬೌಲರ್ ಗಳು ವಿಕೆಟ್ ಪಡೆಯದೇ ನಿರಾಸೆ ಮೂಡಿಸಿದರು.

ಇಂಗ್ಲೆಂಡ್ ತಂಡ ಒಂದು ಹಂತದಲ್ಲಿ 84 ರನ್ ಗೆ 5 ವಿಕೆಟ್ ಕಳೆದುಕೊಂಡು ಶೋಚನೀಯ ಸ್ಥಿತಿಯಲ್ಲಿತ್ತು. ಆದರೆ ಜೆಮ್ಮಿ ಸ್ಮಿತ್ ಮತ್ತು ಹ್ಯಾರಿ ಬ್ರೂಕ್ 6ನೇ ವಿಕೆಟ್ ಗೆ 303 ರನ್ ಗಳ ಬೃಹತ್ ಜೊತೆಯಾಟ ನಿಭಾಯಿಸಿದರು. ಅಕ್ಷ್ ದೀಪ್ ಈ ಜೊತೆಯಾಟ ಮುರಿದು ತಂಡಕ್ಕೆ ಮೇಲುಗೈ ತಂದುಕೊಟ್ಟರು.

ಜೆಮ್ಮಿ ಸ್ಮಿತ್ 207 ಎಸೆತಗಳಲ್ಲಿ 21 ಬೌಂಡರಿ ಮತ್ತು 4 ಸಿಕ್ಸರ್ ಸಹಾಯದಿಂದ 184 ರನ್ ಗಳಿಸಿ ಅಜೇಯರಾಗಿ ಉಳಿದರೆ, ಬ್ರೂಕ್ 234 ಎಸೆತಗಳಲ್ಲಿ 17 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 158 ರನ್ ಬಾರಿಸಿದರು. ಇವರಿಬ್ಬರು ಔಟಾಗುತ್ತಿದ್ದಂತೆ 20 ರನ್ ಗಳ ಅಂತರದಲ್ಲಿ 5 ವಿಕೆಟ್ ಕಳೆದುಕೊಂಡಿತು. ಕೊನೆಯ ಮೂವರು ಶೂನ್ಯಕ್ಕೆ ಔಟಾದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment