Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಸನ್ ರೈಸರ್ಸ್ ಹೈದರಾಬಾದ್ ಅತೀ ದೊಡ್ಡ ಸೋಲು: ಪುಟಿದೆದ್ದ ಕೆಕೆಆರ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು

ಸಂಘಟಿತ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 80 ರನ್ ಗಳ ಭಾರೀ ಅಂತರದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ.

ಕೋಲ್ಕತಾದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 200 ರನ್ ಪೇರಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಎಸ್ ಆರ್ ಎಚ್ 16.4 ಓವರ್ ಗಳಲ್ಲಿ 120 ರನ್ ಗೆ ಆಲೌಟಾಯಿತು.

ಈ ಗೆಲುವಿನೊಂದಿಗೆ ಕೊನೆಯ ಸ್ಥಾನದಲ್ಲಿದ್ದ ಕೆಕೆಆರ್ 4 ಪಂದ್ಯಗಳಿಂದ ತಲಾ 2 ಸೋಲು ಹಾಗೂ ಗೆಲುವಿನೊಂದಿಗೆ 4 ಅಂಕ ಸಂಪಾದಿಸಿ 5ನೇ ಸ್ಥಾನಕ್ಕೇರಿದರೆ, ಎಸ್ ಆರ್ ಎಚ್ ಕೊನೆಯ ಸ್ಥಾನಕ್ಕೆ ಕುಸಿಯಿತು. ಐಪಿಎಲ್ ಇತಿಹಾಸದಲ್ಲೇ ರನ್ ಗಳ ಆಧಾರದ ಮೇಲೆ ಅತೀ ದೊಡ್ಡ ಗೆಲುವು ದಾಖಲಿಸಿ ಕೆಕೆಆರ್ ದಾಖಲೆ ಬರೆಯಿತು. 2024ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 78 ರನ್ ಗಳಿಂದ ಗೆದ್ದಿದ್ದು ಇದುವರೆಗಿನ ದಾಖಲೆಯಾಗಿತ್ತು.

ಕೆಕೆಆರ್ ಪರ ಮಾರಕ ದಾಳಿ ಸಂಘಟಿಸಿದ ವೈಭವ್ ಅರೋರಾ ಮತ್ತು ಸ್ಪಿನ್ನರ್ ವರುಣ್ ಚಕ್ರವರ್ತಿ ತಲಾ 3 ವಿಕೆಟ್ ಪಡೆದು ಮಿಂಚಿದರು. ಆಂಡ್ರೆ ರಸೆಲ್ 2 ವಿಕೆಟ್ ಪಡೆದರು.

ಸಿಡಿಲಬ್ಬರದ ಆಟದಿಂದ ಗಮನ ಸೆಳೆದಿದ್ದ ಹೈದರಾಬಾದ್ 9 ರನ್ ಗೆ 3 ವಿಕೆಟ್ ಕಳೆದುಕೊಂಡು ಆರಂಭದಲ್ಲೇ ಗೆಲುವಿನ ಭರವಸೆ ಕಳೆದುಕೊಂಡಿತು. ಮಧ್ಯಮ ಕ್ರಮಾಂಕದಲ್ಲಿ ಕ್ಲಾಸೆನ್ (33), ಕಮಿಂಡು ಮೆಂಡಿಸ್ (27), ನಿತಿಶ್ ಕುಮಾರ್ ರೆಡ್ಡಿ (19) ಮತ್ತು ಪ್ಯಾಟ್ ಕಮಿನ್ಸ್ (14) ಮಾತ್ರ ಎರಡಂಕಿಯ ಮೊತ್ತ ದಾಟಿದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಕೆಕೆಆರ್ ಕೂಡ 16 ರನ್ ಗೆ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ನಾಯಕ ಅಜಿಂಕ್ಯ ರಹಾನೆ (38), ವೆಂಕಟೇಶ್ ಅಯ್ಯರ್ ಮತ್ತು ಅಂಗರಿಕ್ ರಘುವಂಶಿ ಅರ್ಧಶತಕ ಬಾರಿಸಿ ತಂಡವನ್ನು ಆಧರಿಸಿದರು.

ರಘುವಂಶಿ 32 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಸೇರಿದಂತೆ 50 ರನ್ ಸಿಡಿಸಿದರೆ, ಅಯ್ಯರ್ 29 ಎಸೆತಗಳಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಂದ 60 ರನ್ ಗಳಿಸಿದರು. ರಿಂಕು ಸಿಂಗ್ 17 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 32 ರನ್ ಚಚ್ಚಿ ತಂಡದ ಮೊತ್ತವನ್ನು 200ರ ಗಡಿ ತಲುಪಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment