ನಾಯಕ ರೋಹಿತ್ ಅನುಪಸ್ಥಿತಿಯಲ್ಲಿ ಕಣಕ್ಕಿಳಿದ ಭಾರತ ತಂಡ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ 185 ರನ್ ಗೆ ಆಲೌಟಾಗಿದೆ.
ಸಿಡ್ನಿಯಲ್ಲಿ ಶುಕ್ರವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ನಾಯಕ ಜಸ್ ಪ್ರೀತ್ ಬುಮ್ರಾ ಸಾರಥ್ಯದ ಭಾರತ ತಂಡ ಮೊದಲ ದಿನದಾಟಕ್ಕೂ ಮುನ್ನವೇ ಮೊದಲ ಇನಿಂಗ್ಸ್ ನಲ್ಲಿ 72.2 ಓವರ್ ಗಳಲ್ಲಿ 185 ರನ್ ಗೆ ಪತನಗೊಂಡಿದೆ.
ಆಸ್ಟ್ರೇಲಿಯಾದ ಮಧ್ಯಮ ವೇಗಿ ಸ್ಕಾಟ್ ಬೋಲ್ಯಾಂಡ್ ಮಾರಕ ದಾಳಿಗೆ ತತ್ತರಿಸಿದ ಭಾರತೀಯ ಬ್ಯಾಟ್ಸ್ ಮನ್ ಗಳು ನೆಲಕಚ್ಚಿ ನಿಂತು ಆಡಲು ವಿಫಲರಾದರು. ಬೋಲ್ಯಾಂಡ್ 4 ವಿಕೆಟ್ ಪಡೆದು ಗಮನ ಸೆಳೆದರೆ, ಮಿಚೆಲ್ ಸ್ಟಾರ್ಕ್ ೩, ಪ್ಯಾಟ್ ಕಮಿನ್ಸ್ 2 ವಿಕೆಟ್ ಗಳಿಸಿದರು.
ಭಾರತದ ಪರ ವಿಕೆಟ್ ಕೀಪರ್ ರಿಷಭ್ ಪಂತ್ 98 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 40 ರನ್ ಬಾರಿಸಿ ತಂಡದ ಪರ ವೈಯಕ್ತಿಕ ಗರಿಷ್ಠ ಸಾಧನೆ ಮಾಡಿದರು.
ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ ನಲ್ಲಿ 1 ವಿಕೆಟ್ ಕಳೆದುಕೊಂಡು ೯ ರನ್ ಗಳಿಸಿದೆ. ಉಸ್ಮಾನ್ ಖ್ವಾಜಾ (2) ಔಟಾದರೆ, ಜಸ್ ಪ್ರೀತ್ ಬುಮ್ರಾ ಮೊದಲ ಎಸೆತದಲ್ಲಿ ಬೌಂಡರಿ ಬಾರಿಸಿ ಸ್ಯಾಮ್ ಕೊನ್ಸಾಟ್ಸ್ (7) ವಿಕೆಟ್ ಉಳಿಸಿಕೊಂಡಿದ್ದಾರೆ.