Monday, 16 November 2026 — Kannadavahini
BREAKING NEWS
ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ
ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ: ಮೈಸೂರಲ್ಲೂ ಜಾಗ ಕೊಡ್ತಿವಿ ಎಂದ ಸಿಎಂ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 33 ವೀಕ್ಷಣೆಗಳು
siddaramiah
siddaramiah

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಸೋಮವಾರ ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು.

ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ. ಆದಷ್ಟು ಶೀರ್ಘದಲ್ಲಿಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಿ ಎಂದು ಅವರು ಸೂಚಿಸಿದರು.

ಮೈಸೂರಿನಲ್ಲೂ ಜಾಗ ಕೊಡ್ತೀವಿ

ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡುತ್ತೇವೆ ಎಂದರು.

ಗೃಹ ಸಚಿವರೂ, ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರು, ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದ ರಘುರಾಮ್ ಭಟ್ ಮತ್ತು ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರತಿಭಟನೆ ನಡೆಸಿದ ಸುರೇಶ್ ಗೌಡಗೆ ಟಾಂಗ್

ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಹಣದ ಆಮಿಷ ತೋರಿಸಿ ಸಾರ್ವಜನಿಕ ಮುಜುಗರಕ್ಕೆ ಒಳಗಾಗಿರುವ ಗ್ರಾಮಾಂತರ ಶಾಸಕ ಸುರೇಶ್ ಗೌಡ ಅವರಿಗೆ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಟಾಂಗ್ ಕೊಟ್ಟರು.

ನಾನು 41 ವರ್ಷದಿಂದ ಮಂತ್ರಿ ಆಗಿದ್ದೇನೆ. ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ವೇದಿಕೆಯಲ್ಲೆ ಉತ್ತರಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8418 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment