Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಐಪಿಎಲ್ ಗೆ ಪದಾರ್ಪಣೆ ಮಾಡಿದ ಅತೀ ಕಿರಿಯ 14 ವರ್ಷದ ಸೂರ್ಯವಂಶಿ: ಮೊದಲ ಎಸೆತದಲ್ಲೇ ಸಿಕ್ಸರ್ `ವೈಭವ್’!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು
Vaibhav Suryavanshi

14 ವರ್ಷದ ವೈಭವ್ ಸೂರ್ಯವಂಶಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಅಖಾಡಕ್ಕೆ ಇಳಿಯುವ ಮೂಲಕ ಐಪಿಎಲ್ ಗೆ ಪಾದರ್ಪಣೆ ಮಾಡಿದ ಅತೀ ಕಿರಿಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು.

ಶನಿವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 2ನೇ ಎಸೆತದಲ್ಲಿ ಸಿಕ್ಸರ್ ಬಾರಿಸಿ ಗಮನ ಸೆಳೆದರು.

ವೈಭವ್ ಸೂರ್ಯವಂಶಿ ಐಪಿಎಲ್ ಗೆ ಪಾದರ್ಪಣೆ ಮಾಡಿದ ಅತೀ ಕಿರಿಯ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದು, ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದ ಆಟಗಾರನಿಗಿಂತ 2 ವರ್ಷ ಮುಂಚಿತವಾಗಿ ಐಪಿಎಲ್ ನಲ್ಲಿ ಆಡಿದ ದಾಖಲೆ ಬರೆದಿದ್ದಾರೆ. ಇದಕ್ಕೂ ಮುನ್ನ ಬೆಂಗಾಲ್ ನ ಪ್ರಯಾಸ್ ರೇ ಬರ್ಮನ್ 16 ವರ್ಷ 157 ದಿನಗಳಾಗಿದ್ದಾಗ ಆರ್ ಸಿಬಿ ಪರ 1.5 ಕೋಟಿಗೆ ಐಪಿಎಲ್ ಗೆ ಪಾದರ್ಪಣೆ ಮಾಡಿ ಅತೀ ಕಿರಿಯ ಆಟಗಾರ ಎನಿಸಿಕೊಂಡರು. ಮುಜೀಬ್ ಉರ್ ರೆಹಮಾನ್ (17 ವರ್ಷ 11 ದಿನ) ಡೆಲ್ಲಿ ಡೇರ್ ಡೆವಿಲ್ಸ್ ಪರ ಆಡಿದ್ದರೆ, ರಿಯಾನ್ ಪರಾಗ್ 17 ವರ್ಷ 152 ದಿನ  2019ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿ ಮೂರನೇ ಅತಿ ಕಿರಿಯ ಆಟಗಾರ ಎನಿಸಿಕೊಂಡಿದ್ದರು.

13ನೇ ವಯಸ್ಸಿಗೆ ವೈಭವ್ ಅಂಡರ್ 19 ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 58 ಎಸೆತಗಳಲ್ಲಿ ಶತಕ ಸಿಡಿಸಿ ಗಮನ ಸೆಳೆದಿದ್ದರು. ಈತನ ಸಾಧನೆ ಗುರುತಿಸಿ ರಾಜಸ್ಥಾನ್ ರಾಯಲ್ಸ್ 1.1 ಕೋಟಿ ರೂ. ನೀಡಿ ಹರಾಜಿನಲ್ಲಿ ಖರೀದಿಸಿತ್ತು.

ಬಿಹಾರ ಮೂಲದ ಬಾಲಕ ವೈಭವ್ ಸೂರ್ಯವಂಶಿ ರಣಜಿಯಲ್ಲಿ ತೋರಿದ ಪ್ರದರ್ಶನ ಆಧರಿಸಿ ರಾಜಸ್ಥಾನ್ ರಾಯಲ್ಸ್ ತಂಡ ಸೆಳೆದುಕೊಂಡಿದ್ದರೂ ಇದುವರೆಗೆ ಆಡಲು ಅವಕಾಶ ನೀಡಿರಲಿಲ್ಲ. ಕಳೆದ ಪಂದ್ಯದಲ್ಲಿ ಗಾಯಗೊಂಡ ನಾಯಕ ಸಂಜು ಸ್ಯಾಮ್ಸನ್ ಬದಲಿಗೆ ವೈಭವ್ ಆರಂಭಿಕನಾಗಿ ಕಣಕ್ಕಿಳಿದರು.

ವೈಭವ್ ಸೂರ್ಯವಂಶಿ 20 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 34 ರನ್ ಸಿಡಿಸಿದ್ದೂ ಅಲ್ಲದೇ ಮೊದಲ ವಿಕೆಟ್ ಗೆ ಯಶಸ್ವಿ ಜೈಸ್ವಾಲ್ ಜತೆ 85 ರನ್ ಜೊತೆಯಾಟದಿಂದ ಗಮನ ಸೆಳೆದರು. ಆದರೆ ಮರ್ಕರಂ ಸ್ಪಿನ್ ಎಸೆತದಲ್ಲಿ ಸ್ಟಂಪ್ ಆಗಿ ನಿರಾಸೆಯೊಂದಿಗೆ ಮರಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment