ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಯಶಸ್ವಿ ಶಸ್ತ್ರಚಿಕಿತ್ಸೆ ನಂತರ ಸಂಪೂರ್ಣ ಚೇತರಿಸಿಕೊಂಡಿದ್ದು, ಥಾಣೆಯ ಖಾಸಗಿ ಆಸ್ಪತ್ರೆಯಿಂದ ಮಂಗಳವಾರ ಬಿಡುಗಡೆ ಆಗಿದ್ದಾರೆ.
ಥಾಣೆಯ ಭಿವಾಂಡಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 52 ವರ್ಷದ ವಿನೋದ್ ಕಾಂಬ್ಳಿ ಮಂಗಳವಾರ ಸಂಜೆ 4 ಗಂಟೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮೂತ್ರಕೋಶದ ಸೋಂಕು ಹಾಗೂ ಸ್ನಾಯು ಸೆಳೆತದಿಂದ ಬಳಲುತ್ತಿದ್ದ ವಿನೋದ್ ಕಾಂಬ್ಳಿ ಅವರನ್ನು ಡಿಸೆಂಬರ್ 21ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ತಪಾಸಣೆ ವೇಳೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡು ಬಂದಿತ್ತು.
ಮದ್ಯ ವ್ಯಸನ ಹಾಗೂ ಧೂಮಪಾನ ಚಟದಿಂದ ಈ ಸಮಸ್ಯೆ ಉಂಟಾಗಿದ್ದು ಎಂದು ಹೇಳಲಾಗಿದ್ದು, ಶಸ್ತ್ರಚಿಕಿತ್ಸೆ ನಂತರ ವಿನೋದ್ ಕಾಂಬ್ಳಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಇತ್ತೀಚೆಗೆ ಅವರು ನರ್ಸ್ ಜೊತೆ ಡ್ಯಾನ್ಸ್ ಮಾಡಿ ಸಂತಸ ವ್ಯಕ್ತಪಡಿಸಿದ ವೀಡಿಯೊ ವೈರಲ್ ಆಗಿತ್ತು.