ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟಿ-20 ಕ್ರಿಕೆಟ್ ನಲ್ಲಿ 100 ಬಾರಿ ಅರ್ಧಶತಕ ಬಾರಿಸಿದ ದಾಖಲೆ ಬರೆದಿದ್ದಾರೆ.
ಜೈಪುರದಲ್ಲಿ ಭಾನುವಾರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸುವ ಮೂಲಕ ಟಿ-20 ಕ್ರಿಕೆಟ್ ನಲ್ಲಿ 100 ಬಾರಿ ಅರ್ಧಶತಕ ಬಾರಿಸಿದ ಎರಡನೇ ಆಟಗಾರ ಎಂಬ ದಾಖಲೆಗೆ ಪಾತ್ರರಾದರು.
ವಿರಾಟ್ ಕೊಹ್ಲಿ 39 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ ಅರ್ಧಶತಕ ಪೂರೈಸಿದರು. ಈ ಮೂಲಕ ಟಿ-20 ಕ್ರಿಕೆಟ್ ನಲ್ಲಿ ಅರ್ಧಶತಕಗಳ ಶತಕದ ದಾಖಲೆ ಪೂರೈಸಿದರು.
ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ 108 ಬಾರಿ ಅರ್ಧಶತಕ ಬಾರಿಸಿ ಮೊದಲ ಸ್ಥಾನದಲ್ಲಿದ್ದಾರೆ.