ಶತಕ ಸಿಡಿಸಿ ಭರ್ಜರಿ ಫಾರ್ಮ್ ಗೆ ಮರಳಿರು ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಭಾನುವಾರ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಆಡುವ ಮೂಲಕ ತ್ರಿಶತಕ ಬಾರಿಸಲಿದ್ದಾರೆ.
ಹೌದು, ಬಿಳಿ ಚೆಂಡಿನ ಕ್ರಿಕೆಟ್ ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ವಿರಾಟ್ ಕೊಹ್ಲಿ ದುಬೈನಲ್ಲಿ ಭಾನುವಾರ ನಡೆಯಲಿರುವ ಪಂದ್ಯದಲ್ಲಿ 300ನೇ ಏಕದಿನ ಪಂದ್ಯ ಆಡಲಿದ್ದಾರೆ. ಈ ಮೂಲಕ ಏಕದಿನದಲ್ಲಿ 300, ಟೆಸ್ಟ್ ಹಾಗೂ ಟಿ-20ಯಲ್ಲಿ 100ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ ಮೊದಲ ಆಟಗಾರ ಎಂಬ ದಾಖಲೆಗೆ ಪಾತ್ರರಾಗಲಿದ್ದಾರೆ.
ಏಕದಿನ ಕ್ರಿಕೆಟ್ ನಲ್ಲಿ 300 ಏಕದಿನ ಪಂದ್ಯಗಳನ್ನು ಆಡಿದ ವಿಶ್ವದ 22ನೇ ಹಾಗೂ 7ನೇ ಭಾರತೀಯ ಆಟಗಾರರಾಗಿದ್ದಾರೆ. ಕ್ರಿಸ್ ಗೇಲ್ ಈ ಸಾಧನೆ ಮಾಡಿದ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 6 ವರ್ಷಗಳ ನಂತರ ಈ ಸಾಧನೆ ಮಾಡುತ್ತಿರುವ ಮೊದಲ ಆಟಗಾರ ವಿರಾಟ್ ಕೊಹ್ಲಿ.
ಭಾರತದ 6 ಆಟಗಾರರು ಚಾಂಪಿಯನ್ಸ್ ಟ್ರೋಫಿಯಲ್ಲಿ 300ನೇ ಏಕದಿನ ಪಂದ್ಯವಾಡಿದ ದಾಖಲೆ ಬರೆದಿದ್ದಾರೆ. ಮೊಹಮದ್ ಅಜರುದ್ದೀನ್, ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ ಮತ್ತು ಯುವರಾಜ್ ಸಿಂಗ್.


