Sunday, July 20, 2025
Google search engine
Homeಕ್ರೀಡೆಒಂದು ಪಂದ್ಯ ಸೋತರೂ ಭಾರತಕ್ಕೆ ಡಬ್ಲ್ಯುಟಿಸಿ ಫೈನಲ್ ಮರೀಚಿಕೆ

ಒಂದು ಪಂದ್ಯ ಸೋತರೂ ಭಾರತಕ್ಕೆ ಡಬ್ಲ್ಯುಟಿಸಿ ಫೈನಲ್ ಮರೀಚಿಕೆ

ಪರ್ತ್: ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಸೋಲು ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ.

ಏಕೆಂದರೆ ಈ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ WTC ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಮತ್ತೆ ಟಾಪ್-2 ಹಂತಕ್ಕೇರಲು ಉಳಿದ ಮೂರು ಪಂದ್ಯಗಳಲ್ಲಿ ಜಯಗಳಿಸಲೇಬೇಕು.

ಪ್ರಸ್ತುತ ಅಂಕ ಪಟ್ಟಿಯಲ್ಲಿ ಶೇ.60.710 ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾ (ಶೇ. 59.260) ದ್ವಿತೀಯ ಸ್ಥಾನದಲ್ಲಿದೆ. ಇನ್ನು 57.290 ಹೊಂದಿರುವ ಟೀಮ್ ಇಂಡಿಯಾ ಮೂರನೇ ಸ್ಥಾನದಲ್ಲಿದೆ.

ಈ ಮೂರನೇ ಸ್ಥಾನದಿಂದ ದ್ವಿತೀಯ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಭಾರತ ತಂಡ ಆಸ್ಟ್ರೇಲಿಯಾವನ್ನು ಎಲ್ಲಾ ಪಂದ್ಯಗಳಲ್ಲೂ ಸೋಲಿಸಬೇಕು.

ಇನ್ನು ಮುಂದಿನ 3 ಪಂದ್ಯಗಳಲ್ಲಿ 1 ಡ್ರಾ ಹಾಗೂ 2 ಜಯದೊಂದಿಗೆ ಟೀಮ್ ಇಂಡಿಯಾ 3-1 ಅಂತರದಿಂದ ಸರಣಿ ಗೆದ್ದರೆ, ಒಟ್ಟು ಶೇ. 60.52 ಅಂಕಗಳನ್ನು ಪಡೆಯಲಿದೆ.

ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 2 ಪಂದ್ಯಗಳನ್ನು ಗೆದ್ದರೂ ೫೭% ಅಂಕಗಳನ್ನು ಮಾತ್ರ ಗಳಿಸಲಿದೆ. ಅಂದರೆ ಇಲ್ಲಿ ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲೂ ಒಂದೇ ಒಂದು ಸೋಲು ಕಾಣಬಾರದು. ಈ ಮೂಲಕ 3-1 ಅಂತರದಿಂದ ಸರಣಿ ಗೆದ್ದು ಫೈನಲ್‌ಗೆ ಅರ್ಹತೆ ಪಡೆಯಬಹುದು.

ಒಂದು ವೇಳೆ ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲಿ ಒಂದು ಸೋಲನುಭವಿಸಿ ಸರಣಿಯನ್ನು 3-2 ಅಂತರದಿಂದ ಕೊನೆಗೊಳಿಸಿದರೆ, ಫೈನಲ್ ಅರ್ಹತೆಗಾಗಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ನಡುವಣ ಸರಣಿಯನ್ನು ಅವಲಂಭಿಸಬೇಕಾಗುತ್ತದೆ. ಅಂದರೆ ಇಲ್ಲಿ ಶ್ರೀಲಂಕಾ ತಂಡವು ಆಸ್ಟ್ರೇಲಿಯಾ ವಿರುದ್ಧ ಒಂದು ಗೆಲುವು ಅಥವಾ ಒಂದು ಡ್ರಾ ಸಾಧಿಸಿದರೆ ಭಾರತ ತಂಡ ಫೈನಲ್‌ಗೆ ಅರ್ಹತೆ ಪಡೆಯಲಿದೆ.

ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು 2-2 ಅಂತರದಿಂದ ಕೊನೆಗೊಂಡರೆ, ಶ್ರೀಲಂಕಾ ವಿರುದ್ಧದ ಸರಣಿಯನ್ನು ಸೌತ್ ಆಫ್ರಿಕಾ 2-0 ಅಂತರದಿಂದ ಗೆಲ್ಲಬೇಕು.

ಹಾಗೆಯೇ ಆಸ್ಟ್ರೇಲಿಯಾ ವಿರುದ್ಧ ಶ್ರೀಲಂಕಾ ಒಂದು ಮ್ಯಾಚ್ನಲ್ಲಿ ಗೆಲ್ಲುವುದು ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯವಾಗಲಿದೆ. ದಕ್ಷಿಣ ಆಫ್ರಿಕಾ ತಂಡವು ಶ್ರೀಲಂಕಾ ಹಾಗೂ ಪಾಕಿಸ್ತಾನ್ ವಿರುದ್ಧದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡರೆ 69.44 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲಲ್ಲಿ ಅಗ್ರಸ್ಥಾನ ಅಲಂಕರಿಸಿ ಫೈನಲ್ ಪ್ರವೇಶಿಸುವುದು ಖಚಿತ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments