Friday, July 3, 2026
Google search engine
Homeತಾಜಾ ಸುದ್ದಿಕೈಗಾರಿಕಾ ವಲಯಗಳಲ್ಲಿ 9,823 ಕೋಟಿ ಮೌಲ್ಯದ 10 ಯೋಜನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ಕೈಗಾರಿಕಾ ವಲಯಗಳಲ್ಲಿ 9,823 ಕೋಟಿ ಮೌಲ್ಯದ 10 ಯೋಜನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ಕೈಗಾರಿಕಾ ವಲಯಗಳಲ್ಲಿ 9,823 ಕೋಟಿ ರೂ. ಮೌಲ್ಯದ 10 ಯೋಜನೆಗಳಿಗೆ ರಾಜ್ಯ ರಾಜ್ಯ ಉನ್ನತ ಮಟ್ಟದ 64ನೇ ಒಪ್ಪಿಗೆ ನೀಡಿಕೆ ಸಭೆಯ ಅನುಮೋದನೆ ನೀಡಿದೆ.

ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ 64ನೇ ಒಪ್ಪಿಗೆ ನೀಡಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಕೋಚನಹಳ್ಳಿಯ ಎಲೆಕ್ಟ್ರಾನಿಕ್ಸ್ ಮ್ಯಾನುಫಾಕ್ಚರಿಂಗ್ ಕ್ಲಸ್ಟರ್ ನಲ್ಲಿ ಸೆಮಿಕಂಡಕ್ಟರ್ ವಲಯದಲ್ಲಿ ರೂ. 3425 ಕೋಟಿ ವೆಚ್ಚದ ಪ್ರಥಮ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನಗಳ ಉತ್ಪಾದನೆ ಸಂದರ್ಭದಲ್ಲಿ ರೈತರಿಗೂ ಲಾಭಾಂಶದಲ್ಲಿ ಪಾಲು ನೀಡುವ ಕುರಿತು ಪರಿಶೀಲನೆ ನಡೆಸಬೇಕು. ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಈ ಕುರಿತು ಅನುಸರಿಸುತ್ತಿರುವ ನಿಯಮಗಳನ್ನು ಪರಿಶೀಲಿಸಲು ಸೂಚನೆ ನೀಡಿದರು.

ಕೆಐಎಡಿಬಿಯಿಂದ ಕೈಗಾರಿಕೆಗಳನ್ನು ಆರಂಭಿಸಲು ಜಮೀನು ಪಡೆಯುವ ಕಂಪೆನಿಗಳು ನಿಗದಿತ ಅವಧಿಯಲ್ಲಿ ಕೈಗಾರಿಕೆಯನ್ನು ಆರಂಭಿಸದಿದ್ದರೆ ದಂಡ ವಿಧಿಸುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಪರಿಶೀಲನೆ ನಡೆಸಬೇಕು.
ಸರ್ಕಾರದ ನಿಯಮಾವಳಿಗೆ ಅನುಸಾರವಾಗಿ ಕೈಗಾರಿಕೆಗಳು ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ಮುಖ್ಯಮಂತ್ರಿ ಅವರು ಸೂಚಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments