Saturday, September 12, 2026
Google search engine
Homeರಾಜ್ಯಮುಡಾದ 2000 ಕೋಟಿ ಮೌಲ್ಯದ 1100 ಬದಲಿ ನಿವೇಶನ ಹಂಚಿಕೆ ರದ್ದು: ರಾಜ್ಯ ಸರ್ಕಾರ ಮಹತ್ವದ...

ಮುಡಾದ 2000 ಕೋಟಿ ಮೌಲ್ಯದ 1100 ಬದಲಿ ನಿವೇಶನ ಹಂಚಿಕೆ ರದ್ದು: ರಾಜ್ಯ ಸರ್ಕಾರ ಮಹತ್ವದ ಆದೇಶ

ಮೈಸೂರು: ವಿವಾದಾತ್ಮಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 50:50 ಅನುಪಾತದಲ್ಲಿ ಹಂಚಿಕೆಯಾಗಿದ್ದ ಬದಲಿ ನಿವೇಶನಗಳ ಹಂಚಿಕೆ ಆದೇಶವನ್ನು ಸರ್ಕಾರ ರದ್ದುಪಡಿಸಿದೆ.

ಮೊದಲ ಹಂತದಲ್ಲಿ ಇಂತಹ ಸುಮಾರು 1100 ಬದಲಿ ನಿವೇಶನಗಳ ಹಂಚಿಕೆಯನ್ನು ರದ್ದು ಮಾಡಿದ್ದು, ಇವುಗಳ ಮಾರುಕಟ್ಟೆ ಮೌಲ್ಯ ಅಂದಾಜು ₹2 ಸಾವಿರ ಕೋಟಿ ಇದೆ.

ಮುಡಾದಲ್ಲಿನ ಬದಲಿ ನಿವೇಶನ ಹಂಚಿಕೆ ಅಕ್ರಮಗಳ ಆರೋಪದ ತನಿಖೆಗಾಗಿ ಸರ್ಕಾರವು ಏಕಸದಸ್ಯ ವಿಚಾರಣಾ ಸಮಿತಿಯನ್ನು ರಚಿಸಿತ್ತು. ಆ ಸಮಿತಿಯ ಶಿಫಾರಸುಗಳನ್ನು ಆಧರಿಸಿ. ಉನ್ನತ ಮಟ್ಟದ ತಾಂತ್ರಿಕ ಸಮಿತಿಯು ನೀಡಿರುವ ಆಧಾರದ ಮೇಲೆ ಕ್ರಮ ಕೈಗೊಂಡಿದೆ.

ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ. ಲತಾ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅವರಿಗೆ ಪತ್ರ ಬರೆದಿದ್ದು, ಹಲವು ನಿರ್ದೇಶನಗಳನ್ನು ನೀಡಿದ್ದಾರೆ.

ಸರ್ಕಾರದ ನಿರ್ದೇಶನ ಉಲ್ಲಂಘಿಸಿ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಈಗಾಗಲೇ ನೋಂದಣಿಯಾಗಿರುವ ಬದಲಿ ನಿವೇಶನಗಳ ಕ್ರಯಪತ್ರಗಳನ್ನು ರದ್ದುಪಡಿಸಲು ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಬೇಕು. ಇದುವರೆಗೆ ಕ್ರಯಪತ್ರವಾಗದ ಪ್ರಕರಣಗಳಲ್ಲಿ ಕ್ರಯಪತ್ರ ನೀಡಬಾರದು’ ಎಂದು ವಿವರಿಸಿದ್ದಾರೆ.

ಈಗಾಗಲೇ ನೋಂದಣಿಯಾಗಿರುವ ಬದಲಿ ನಿವೇಶನಗಳಿಗೆ ಖಾತಾ ಮಾಡಿಕೊಡುವುದನ್ನು ತಡೆಹಿಡಿಯಲು ಮೈಸೂರು ಮಹಾನಗರ ಪಾಲಿಕೆ, ಸಂಬಂಧಪಟ್ಟ ನಗರಸಭೆ ಅಥವಾ ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡಬೇಕು. ಒಂದು ವೇಳೆ ಖಾತಾ ಆಗಿದ್ದರೆ, ಅವುಗಳನ್ನು ರದ್ದುಪಡಿಸಲು ಸೂಚಿಸಬೇಕು. ಈ ಎಲ್ಲ ನಿರ್ದೇಶನಗಳ ಕುರಿತು ಅನುಪಾಲನಾ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments