Sunday, November 24, 2024
Google search engine
Homeತಾಜಾ ಸುದ್ದಿಯುಎಇನಲ್ಲಿ ಪುರುಷ ನರ್ಸ್ ಗಳಿಗೆ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ: 1.11 ಲಕ್ಷ ರೂ....

ಯುಎಇನಲ್ಲಿ ಪುರುಷ ನರ್ಸ್ ಗಳಿಗೆ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ: 1.11 ಲಕ್ಷ ರೂ. ವೇತನ!

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಈ)ನಲ್ಲಿ ಪುರುಷ ನರ್ಸ್ ಗಳಿಗೆ  ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಇರುವರಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಅರ್ಹರಿಗೆ ಈ ಉದ್ಯೋಗ ಅವಕಾಶವನ್ನು ಒದಗಿಸಲಿದೆ.

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಈ ಹಿಂದೆ ಸ್ಲೋವಾಕಿಯಾದಲ್ಲಿ ಹಲವಾರು ಕನ್ನಡಿಗರಿಗೆ ನಿಗಮದ ಮೂಲಕ ಉದ್ಯೋಗ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು. ಇದರ ಬೆನಲ್ಲೇ ಯುಎಈ ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗ ನೀಡುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಹಾಗೆಯೇ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ್ ಅವರು ಈ ಯೋಜನೆಗೆ ವಿಶೇಷ ಆಸಕ್ತಿ ವಹಿಸಿದ್ದಾರೆ.

ಯುಎಈ ನಲ್ಲಿ ಪುರುಷ ನರ್ಸಿಂಗ್ ಹುದ್ದೆ ಬಯಸುವವರು 40 ವರ್ಷದೊಳಗಿನವರಾಗಿರಬೇಕು. 2 ವರ್ಷ ಅನುಭವ ಹೊಂದಿರಲೇಬೇಕು. ಆಯ್ಕೆಯಾಗುವವರಿಗೆ 5 ಸಾವಿರ ಎಇಡಿ(ಮಾಸಿಕ 1,11,000. ರೂ ವೇತನ), 30 ದಿನ ವೇತನ ರಹಿತ ಸಂಬಳ, ಕಂಪನಿ ವತಿಯಿಂದಲೇ ವೈದ್ಯಕೀಯ ವಿಮೆ, ಸಾರಿಗೆ ಮತ್ತು ವಿಮಾನಯಾನ ಟಿಕೆಟ್, ಆಹಾರ ಸೌಲಭ್ಯ, ವೀಸಾ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತದೆ.

ಸಂಪೂರ್ಣವಾಗಿ ಉಚಿತವಾಗಿದ್ದು, ಆಗಸ್ಟ್ ತಿಂಗಳಿನಲ್ಲಿ ಆನ್‌ಲೈನ್ ಮೂಲಕ ಸಂದರ್ಶನ ನಡೆಯಲಿದೆ. ಸಂದರ್ಶನದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಕೌಶಲ್ಯಾಭಿವೃದ್ದಿ ನಿಗಮ ತಿಳಿಸಿದೆ.

ಕೆಎಸ್‌ಡಿಸಿ ಈ ಹಿಂದೆ ಸ್ಲೋವಾಕಿಯಾದಲ್ಲಿ ಐಟಿ, ಡಿಪ್ಲೊಮಾ, ಐಟಿಐ ಮತ್ತು ಇತರ ಉದ್ಯೋಗ-ಆಧಾರಿತ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಹಲವಾರು ಯುವಕರಿಗೆ ಉದ್ಯೋಗಗಳನ್ನು ಒದಗಿಸಿದೆ. ಕೆಎಸ್‌ಡಿಸಿ ಹಂಗೇರಿಯಲ್ಲಿ 37 ಡ್ರೈವರ್ಗಳಿಗೆ ಉದ್ಯೋಗಗಳನ್ನು ಒದಗಿಸಿತ್ತು. ಜೊತೆಗೆ ವೆಲ್ಡರ್‌ಗಳಿಗೆ ಮಾರಿಷಸ್‌ನಲ್ಲಿ ಉದ್ಯೋಗಗಳನ್ನು ಪಡೆಯಲು ಸಹಾಯ ಮಾಡುತ್ತದೆ.

ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು ಕೆಎಸ್‌ಡಿಸಿ ವೆಬ್ಸೈಟ್ http://imck.kaushalkar.com ಭೇಟಿ ನೀಡಬಹುದು ಮತ್ತು hr.imck@gmail.com ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಈ ವಾಟ್ಸಪ್ಪ್ ನಂಬರ್ಗಳ 9606492213/ 9606492214 ಮೂಲಕ ವಿವರಗಳನ್ನು ಪಡಯಬಹುದು ಹಾಗು ಈ ವಿಳಾಸಕ್ಕೆ ಇಂಟರ್ನ್ಯಾಷನಲ್ ಮೈಗ್ರೇಶನ್ ಸೆಂಟರ್– ಕರ್ನಾಟಕ (IMC-K), ನಾಲ್ಕನೇ ಮಹಡಿ, ಕಲ್ಯಾಣ ಸುರಕ್ಷಾ ಭವನ, ಐಟಿಐ ಕಾಲೇಜು ಕ್ಯಾಂಪಸ್, ಡೇರಿ ಸರ್ಕಲ್, ಬನ್ನೇರುಘಟ್ಟ ಮುಖ್ಯ ರಸ್ತೆ, ಬೆಂಗಳೂರು–560029 ಭೇಟಿ ನೀಡಬಹುದು.

job in UAE

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments