ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಶುಕ್ರವಾರವೂ ಮುಂದುವರಿದಿದ್ದು, ಇದರಿಂದ ಬಾಗಲಕೋಟೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಗಲಾಟೆ ನಡೆದ ಕೂಗಳತೆ ದೂರದಲ್ಲಿ ಮತ್ತೊಂದು ಘಟನೆ ನಡೆದಿದ್ದು, ತರಕಾರಿ ತುಂಬಿದ್ದ ಗೂಡಂಗಡಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು ತರಕಾರಿ ಮಾರುಕಟ್ಟೆಯಲ್ಲಿ ಇರಿಸಲಾಗಿದ್ದ ತರಕಾರಿ ತಳ್ಳುವ ಗಾಡಿಗಳಿಗೆ ಬೆಂಕಿ ಹಚ್ಚಿದ್ದಾರೆ.
ಕಿಡಿಗೇಡಿಗಳ ಕೃತ್ಯದಿಂದ ತಳ್ಳು ಗಾಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ,ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಹಳೆ ಬಾಗಲಕೋಟೆಯ ತರಕಾರಿ ಮಾರ್ಕೆಟ್‌ನಲ್ಲಿ ಈ ಘಟನೆ ಸಂಭವಿಸಿದ್ದು, ನಗರದಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಹಿಂದುಪರ ಸಂಘಟನೆಗಳು ಅಂಗಡಿಗಳನ್ನು ಮುಚ್ಚಿ ಪ್ರತಿಭಟನೆಗೆ ಮುಂದಾಗಿದ್ದು, ಇದನ್ನು ಪೊಲೀಸರು ತಡೆಯಲು ಯತ್ನಿಸಿದಾಗ ಅವರ ಮೇಲೂ ಕಲ್ಲುತೂರಾಟವಾಗಿದೆ. ಇದರಿಂದ ಪೊಲೀಸರು ಉದ್ವಿಗ್ನ ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಹೇಳಲಾಗಿದೆ.



