Saturday, May 16, 2026
Google search engine
Homeದೇಶಆರ್‌ ಎಸ್‌ ಎಸ್‌ ಮುಖ್ಯಸ್ಥ ಪ್ರಯಾಣಿಸುತ್ತಿದ್ದ ವಂದೇ ಭಾರತ್‌ ರೈಲಿನ ಮೇಲೆ ಕಲ್ಲು ತೂರಾಟ!

ಆರ್‌ ಎಸ್‌ ಎಸ್‌ ಮುಖ್ಯಸ್ಥ ಪ್ರಯಾಣಿಸುತ್ತಿದ್ದ ವಂದೇ ಭಾರತ್‌ ರೈಲಿನ ಮೇಲೆ ಕಲ್ಲು ತೂರಾಟ!

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಲಕ್ನೋ-ದೆಹಲಿ ನಡುವೆ ಸಂಚರಿಸುವ ವಂದೇ ಭಾರತ್‌ನಲ್ಲಿ ಭಾಗವತ್‌ ಮೀರತ್‌ಗೆ ಹಿಂತಿರುಗುತ್ತಿದ್ದಾಗ ಹಾರ್ದೋಯ್ ಗ್ರಾಮದಲ್ಲಿ ಗುರುವಾ್ ಮಧ್ಯಾಹ್ನ ಈ ಘಟನೆ ನಡೆದಿದೆ.

ಗುರುವಾರ ಮಧ್ಯಾಹ್ನ 3:30 ರ ವೇಳೆಗೆ ಘಟನೆಯಾಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಮೀರತ್ ರೈಲು ನಿಲ್ದಾಣದಲ್ಲಿ ಬಿಗಿ ಭದ್ರತೆಯಲ್ಲಿ ಮೋಹನ್‌ ಭಾಗವತ್‌ ಇಳಿದಿದ್ದಾರೆ. ಇಂದು ಮತ್ತು ನಾಳೆ 2 ದಿನಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಕ್ರೀಡಾಪಟುಗಳು ಮತ್ತು ಬುದ್ಧಿಜೀವಿಗಳ ಸದಸ್ಯರೊಂದಿಗೆ ಸಂವಾದ ನಡೆಸಲಿದ್ದಾರೆ.

ಕಲ್ಲು ಹೊಡೆದ ಬಗ್ಗೆ ರೈಲ್ವೆ ಪೊಲೀಸ್ ವಿಶೇಷ ತಂಡದಿಂದ ತನಿಖೆ ನಡೆಸಲಾಗುತ್ತಿದೆ. ಭಾಗವತ್ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಅವರು ರಾತ್ರಿ 9 ಗಂಟೆ ಸುಮಾರಿಗೆ ಮೀರತ್ ರೈಲು ನಿಲ್ದಾಣದಲ್ಲಿ ಬಿಗಿ ಭದ್ರತೆಯಲ್ಲಿ ಇಳಿದು ಅವರು ತಂಗಿರುವ ಶತಾಬ್ದಿ ನಗರದ ಮಾಧವ್ ಕುಂಜ್‌ಗೆ ತೆರಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments