Thursday, November 21, 2024
Google search engine
Homeಅಪರಾಧಮಹಿಳೆ ಕಿಡ್ನಾಪ್, ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ವಿರುದ್ಧ 2ನೇ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ

ಮಹಿಳೆ ಕಿಡ್ನಾಪ್, ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ವಿರುದ್ಧ 2ನೇ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 4 ಪ್ರಕರಣಗಳ ಪೈಕಿ ಎರಡನೇ ಪ್ರಕರಣದ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ.

ಹೊಳೆನರಸೀಪುರದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಮನೆಯಲ್ಲಿ 60 ವರ್ಷದ ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಮತ್ತು ಕಿಡ್ನಾಪ್ ಪ್ರಕರಣದಲ್ಲಿ ಎಸ್ ಐಟಿ ಪೊಲೀಸರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಬಂಧನದ ಬೆನ್ನಲ್ಲೇ ಮಹಿಳೆಯನ್ನು ಕಿಡ್ನಾಪ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಅವರನ್ನು ಕೂಡ ಬಂಧಿಸಲಾಗಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದರು.

ಸುದೀರ್ಘ ವಿಚಾರಣೆ ನಂತರ 162ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆ ಹಾಗೂ ಎಫ್ ಎಲ್ ಎಲ್ ವರದಿ ಹಾಗೂ ತಾಂತ್ರಿಕ ವರದಿಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಜ್ವಲ್ ರೇವಣ್ಣ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆ ಕೆಲಸದಸಕೆಯನ್ನು ಕರೆಸಿಕೊಂಡಿದ್ದು, ಪದೇಪದೇ ಅತ್ಯಾಚಾರ ನಡೆಸಿರುವುದು ತನಿಖೆ ವೇಳೆ ದೃಢಪಟ್ಟಿದೆ.

ಬಾತ್ ರೂಮ್ ಗೆ ಹೋಗ್ತಿನಿ ಬಿಡ್ಬಿಡು ಕಣಣ್ಣ ಎಂದು ಮಹಿಳೆ ಅಂಗಲಾಚಿದರೂ ಬಿಡದೇ ಅತ್ಯಾಚಾರ ಎಸಗಿದ್ದು, ಅತ್ಯಾಚಾರದ ವೀಡಿಯೊ ಮಾಡಿ ಮಗನಿಗೆ ಕಳಿಸ್ಲಾ ಎಂದು ಬೆದರಿಸಿ ಪ್ರಜ್ವಲ್ ರೇವಣ್ಣ ಪದೇಪದೇ ಅತ್ಯಾಚಾರ ಎಸಗಿದ್ದಾರೆ ಎಂದು ಚಾರ್ಜ್‌ಶೀಟ್‌ ನಲ್ಲಿ ವಿವರಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments