ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಎಡಗೈ ಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಆಗಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡೆವಿಲ್ ಚಿತ್ರದ ಚಿತ್ರೀಕರಣದ ವೇಳೆ ಎಡಗೈಗೆ ಪೆಟ್ಟಾಗಿ ನೋವುಂಟಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಭಾನುವಾರ ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ಕೈ ನೋವಿನ ನಡುವೆಯೂ ಏಪ್ರಿಲ್ 4ರಂದು ನಟಿ ಸುಮಲತಾ ಮಂಡ್ಯದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಬಹಿರಂಗ ಸಭೆಯಲ್ಲಿ ತೀರ್ಮಾನ ಪ್ರಕಟಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುಮಲತಾ ಕಾರ್ಯಕ್ರಮದ ವೇಳೆ ಅಭಿಮಾನಿಯೊಬ್ಬ ಕೈ ಮುಟ್ಟಿದ್ದರಿಂದ ನೋವುಂಟಾಗಿತ್ತು. ಅಲ್ಲದೇ ಮರಳುವಾಗ ಯಾರೂ ನನ್ನ ಕೈ ಮುಟ್ಟದೇ ಸಹಕರಿಸಿ ಎಂದು ದರ್ಶನ್ ಮನವಿ ಮಾಡಿದ್ದರು.