ಹೆನ್ರಿಚ್ ಕ್ಲಾಸೆನ್ ಮತ್ತು ಪ್ಯಾಟ್ ಕಮಿನ್ಸ್ ಸೇರಿದಂತೆ ಕಳೆದ ಐಪಿಎಲ್ ಆವೃತ್ತಿಯ ಅತ್ಯಂತ ದುಬಾರಿ ಆಟಗಾರರನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ ಉಳಿಸಿಕೊಂಡು ಅಚ್ಚರಿ ಮೂಡಿಸಿದೆ.
2025ರ ಆವೃತ್ತಿಯ ಐಪಿಎಲ್ ಹರಾಜಿನಲ್ಲಿ ಕ್ಲಾಸೆನ್ ಅವರನ್ನು 23 ಕೋಟಿ ರೂ.ಗೆ ಖರೀದಿಸಿತ್ತು. ಮೊದಲ ಪ್ರಾಶಸ್ತ್ಯ ಆಟಗಾರನಾಗಿ ಕ್ಲಾಸೆನ್ ಅವರನ್ನು ಹಾಗೂ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅವರನ್ನು 18 ಕೋಟಿ ರೂ.ಗೆ ಎರಡನೇ ಪ್ರಾಶಸ್ತ್ಯ ಆಟಗಾರನಾಗಿ ಹಾಗೂ 14 ಕೋಟಿ ರೂ.ಗೆ ಅಭಿಷೇಕ್ ಶರ್ಮ ಅವರನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ ಉಳಿಸಿಕೊಂಡು ಅಚ್ಚರಿ ಮೂಡಿಸಿದೆ.
ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್ ಸ್ಥಾನ ಗಳಿಸಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಪ್ರದರ್ಶನದೊಂದಿಗೆ ಗಮನ ಸೆಳೆದಿತ್ತು. ಈ ಹಿನ್ನೆಲೆಯಲ್ಲಿ ಅತ್ಯಂತ ದುಬಾರಿ ಆಟಗಾರರನ್ನು ಉಳಿಸಿಕೊಳ್ಳುವ ನಿರ್ಧಾರ ಮಾಡಿದೆ. ಕ್ಲಾಸೆನ್, ಪ್ಯಾಟ್ ಕಮಿನ್ಸ್, ಅಭಿಷೇಕ್ ಅಲ್ಲದೇ ಟ್ರಾವಿಸ್ ಹೆಡ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಅವರನ್ನು ಕೂಡ ಉಳಿಸಿಕೊಂಡಿದೆ.