Monday, June 1, 2026
Google search engine
Homeಕಾನೂನುರಾಜ್ಯ ಸರ್ಕಾರಕ್ಕೆ 25 ಲಕ್ಷ ರೂ. ದಂಡ: ಬಿಜೆಪಿ ಸಂಸದ ತೇಜಸ್ವಿ ಸೂರ್ಯಗೆ ಬಿಗ್ ರಿಲೀಫ್

ರಾಜ್ಯ ಸರ್ಕಾರಕ್ಕೆ 25 ಲಕ್ಷ ರೂ. ದಂಡ: ಬಿಜೆಪಿ ಸಂಸದ ತೇಜಸ್ವಿ ಸೂರ್ಯಗೆ ಬಿಗ್ ರಿಲೀಫ್

ರೈತ ಆತ್ಮಹತ್ಯೆ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ್ದಕ್ಕಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣವನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ 25 ಲಕ್ಷ ರೂ. ದಂಡ ವಿಧಿಸಿದೆ.

ಹಾವೇರಿಯಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠ ಪ್ರಕರಣ ನ್ಯಾಯಾಂಗ ವೀಕ್ಷಣೆಗೆ ಒಳಪಟ್ಟ ವಿಷಯವಲ್ಲ, ನ್ಯಾಯಾಲಯದ ಕಾಲಹರಣ ಮಾಡಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ 25 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದರು.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ವಿಚಾರಣೆ ವೇಳೆ ಪ್ರಕರಣದ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ನ್ಯಾಯಾಲಯದ ಹೊರಗೆ ಈ ಹೋರಾಟಗಳನ್ನು ಮಾಡಿ ಎಂದು ಖಡಕ್ ಎಚ್ಚರಿಕೆ ನೀಡಿದರು.

ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ರೈತ‌ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಡಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ 2024ರ ನವೆಂಬರ್‌ 14ರಂದು ಎಫ್​ಐಆರ್ ದಾಖಲಾಗಿತ್ತು. ಈ ಬಗ್ಗೆ 2024 ನವೆಂಬರ್ 8ರಂದು, ತೇಜಸ್ವಿ ಸೂರ್ಯ ತಮ್ಮ ಟ್ವೀಟರ್​ನಲ್ಲಿ ರಾಜ್ಯದ ಓರ್ವ ರೈತ ತನ್ನ ಭೂಮಿಯನ್ನು ವಕ್ಫ್ ಮಂಡಳಿಯು ವಶಪಡಿಸಿಕೊಂಡ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಸ್ಟ್ ಮಾಡಿದ್ದರು.

ಸಿಎಂ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಕರ್ನಾಟಕದಲ್ಲಿ ದುರಂತಗಳು ಸಂಭವಿಸುತ್ತಿವೆ. ಪ್ರತಿ ದಿನ ಇಂಥ ಘಟನೆಗಳು ಸಂಭವಿಸುತ್ತಿವೆ ಎಂದು ತೇಜಸ್ವಿ ಸೂರ್ಯ ತಮ್ಮ ಟ್ವೀಟ್​ನಲ್ಲಿ ಉಲ್ಲೇಖಿಸಿದ್ದರು. ಬಳಿಕ ಟ್ವೀಟ್​ ಅನ್ನು ಅಳಿಸಿಹಾಕಲಾಗಿತ್ತು.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 353(2) ರ ಅಡಿಯಲ್ಲಿ ನಕಲಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ಹಾವೇರಿ ಸೈಬರ್ ಅಪರಾಧ, ಆರ್ಥಿಕ ಮತ್ತು ಮಾದಕವಸ್ತು ಅಪರಾಧಗಳ ಪೊಲೀಸರು ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದರು. 2024ರ ಡಿಸೆಂಬರ್​ನಲ್ಲಿ ಈ ಪ್ರಕರಣವನ್ನು ರದ್ದುಗೊಳಿಸಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಹೈಕೋರ್ಟ್​ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments