Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಕಾನೂನು

ವಕ್ಫ್ ತಿದ್ದುಪಡಿ ಮಸೂದೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 35 ವೀಕ್ಷಣೆಗಳು
supreme court
supreme court

ನವದೆಹಲಿ: ವಕ್ಫ್ ಮಂಡಳಿಗಳಿಗೆ ಮುಸ್ಲಿಂ, ಮುಸ್ಲಿಂಮೇತರ ಸದಸ್ಯರ ನೇಮಕ ಮಾಡದಂತೆ ಮತ್ತು ವಕ್ಫ್ ಆಸ್ತಿಗಳಲ್ಲಿ ಯಾವುದೇ ಬದಲಾವಣೆ ಮಾಡದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ, ವಕ್ಫ್ ತಿದ್ದುಪಡಿ ಕಾಯ್ದೆಗೆ ಪೂರ್ಣ ಪ್ರಮಾಣ ತಡೆ ನೀಡಲು ನಿರಾಕರಿಸಿತು.

ಕೇಂದ್ರ ಸರ್ಕಾರವು ತನ್ನ ಪ್ರತಿಕ್ರಿಯೆಯನ್ನು ಒಂದು ವಾರದೊಳಗೆ ಸಲ್ಲಿಸಬೇಕೆಂದು ಕೋರ್ಟ್ ಸೂಚಿಸಿದೆ. ಅರ್ಜಿದಾರರಿಗೆ ಕೇಂದ್ರದ ಪ್ರತಿಕ್ರಿಯೆಯನ್ನು ಪರಿಶೀಲಿಸಲು ಐದು ದಿನಗಳ ಕಾಲಾವಕಾಶ ನೀಡಲಾಗಿದೆ. ಮುಂದಿನ ವಿಚಾರಣೆಯನ್ನು ಮೇ 5ಕ್ಕೆ ನಿಗದಿಪಡಿಸಲಾಗಿದೆ.

ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೇಂದ್ರ ಸರ್ಕಾರವು ಜನರಿಗೆ ಜವಾಬ್ದಾರವಾಗಿದೆ. ಕೆಲವು ಪ್ರಕರಣಗಳಲ್ಲಿ ಸಂಪೂರ್ಣ ಹಳ್ಳಿಗಳನ್ನು ವಕ್ಫ್ ಆಸ್ತಿ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಜನರು ಈ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಲಕ್ಷಾಂತರ ಜನರ ಕಳವಳಕ್ಕೆ ಪ್ರತಿಕ್ರಿಯೆಯಾಗಿ ಈ ಶಾಸನವನ್ನು ತರಲಾಗಿದೆ. ಒಂದರ ನಂತರ ಒಂದರಂತೆ ಲೆಕ್ಕವಿಲ್ಲದಷ್ಟು ಪ್ಲಾಟ್‌ಗಳನ್ನು ವಕ್ಫ್ ಎಂದು ಘೋಷಿಸಲಾಗುತ್ತಿದೆ. ಈ ವಿಷಯವು ಗಮನಾರ್ಹ ಸಾರ್ವಜನಿಕ ಪರಿಣಾಮಗಳನ್ನು ಬೀರುತ್ತದೆ ಎಂದು ತಿಳಿಸಿದರು.

ಈ ಕಾರಣಕ್ಕೆ ಯಾವುದೇ ಮಧ್ಯಂತರ ನಿರ್ಧಾರಕ್ಕೆ ಕೋರ್ಟ್ ಬರಬಾರದು. ಕೋರ್ಟ್ ಆತುರದ ಮಧ್ಯಂತರ ಆದೇಶ ಹೊರಡಿಸಬಾರದು. ಮಧ್ಯಂತರ ತಡೆ ನೀಡುವುದು ಅತ್ಯಂತ ಕಠಿಣ ಹೆಜ್ಜೆಯಾಗಲಿದೆ. ಈ ವಿಷಯಕ್ಕೆ ಆಳವಾದ ಚರ್ಚೆಯ ಅಗತ್ಯವಿದೆ. ಈ ವಿಚಾರವನ್ನು ಆತುರದಿಂದ ನಿರ್ಧರಿಸಲು ಸಾಧ್ಯವಿಲ್ಲ. ಈ ಬಗ್ಗೆ ಹೆಚ್ಚಿನ ದಾಖಲೆ ಕೇಂದ್ರ ಸರಕಾರ ಸಲ್ಲಿಸಲಿದೆ. ಪ್ರಾಥಮಿಕ ಪ್ರತಿಕ್ರಿಯೆಯನ್ನು ಸಲ್ಲಿಸಲು ಒಂದು ವಾರದ ಸಮಯ ಬೇಕು ಎಂದು ಮನವಿ ಮಾಡಿದರು.

ವಾದ ಆಲಿಸಿದ ಪೀಠ, ಮುಂದಿನ ವಿಚಾರಣೆಯವರೆಗೆ ವಕ್ಫ್‌ ಮಂಡಳಿಗೆ ಮುಸ್ಲಿಂ ಅಥವಾ ಮುಸ್ಲಿಮೇತರರನ್ನು ನೇಮಕ ಮಾಡುವಂತಿಲ್ಲ ಮತ್ತು ವಕ್ಫ್ ಆಸ್ತಿ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಬೇಕು ಎಂದು ಹೇಳಿತು. ಸಿಂಧುತ್ವ ಪ್ರಶ್ನಿಸಿದ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ 7 ದಿನಗಳ ಕಾಲಾವಕಾಶ ನೀಡಿತು. ಅರ್ಜಿದಾರರು 5 ದಿನಗಳಲ್ಲಿ ಕೇಂದ್ರದ ಉತ್ತರಕ್ಕೆ ಮರು ಪ್ರತಿಕ್ರಿಯೆ ಸಲ್ಲಿಸಬಹುದು ಎಂದು ಹೇಳಿತು.

ಇದೇ ವೇಳೆ ಇಷ್ಟು ಅರ್ಜಿಗಳನ್ನು ನಿಭಾಯಿಸುವುದು ಅಸಾಧ್ಯ. ಕೇವಲ 5 ಅರ್ಜಿಗಳನ್ನು ಮಾತ್ರ ಆಲಿಸಲಾಗುವುದು. ಯಾವ ಐದು ಅರ್ಜಿಗಳನ್ನು ವಿಚಾರಣೆ ನಡೆಸಬೇಕು ಎಂಬುದನ್ನು ನೀವೇ ಆಯ್ಕೆ ಮಾಡಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸುಪ್ರೀಂಕೋರ್ಟ್ ಮಧ್ಯಂತರ ಆದೇಶದ ಬಳಿಕ ಮುಂದಿನ ವಿಚಾರಣೆಯವರೆಗೆ ‘ವಕ್ಫ್ ಬೈ ಡೀಡ್’ ಮತ್ತು ‘ಬಳಕೆದಾರರಿಂದ ವಕ್ಫ್ ಅನ್ನು ಡಿನೋಟಿಫೈ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಪರ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment