ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಭೀರ್ ಪುರ್ಕೆಯೆಸ್ತಾ ಅವರ ಬಂಧನ ಅಕ್ರಮವಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ದೆಹಲಿ ಪೊಲೀಸರಿಗೆ ಸೂಚಿಸಿದೆ.
ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ವಿಭಾಗೀಯ ಪೀಠ, ಪ್ರಭೀರ್ ಅವರನ್ನು ಇನ್ನಷ್ಟು ಅವಧಿಗೆ ಪೊಲೀಸ್ ಕಸ್ಟಡಿಗೆ ನೀಡುವ ದೆಹಲಿ ಪೊಲೀಸರ ಮನವಿಯನ್ನು ತಿರಸ್ಕರಿಸಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ.
ಕಳೆದ ವರ್ಷ ಯುಎಪಿಎ ಕಾಯ್ದೆಯಡಿ ಪ್ರಭೀರ್ ಅವರನ್ನು ಬಂಧಿಸಿದ್ದ ದೆಹಲಿ ಪೊಲೀಸರು ಪಾಕಿಸ್ತಾನದ ಉಗ್ರಗಾಮಿ ಸಂಘಟನೆಗಳಿಗೆ ಹಣಕಾಸು ನೆರವು ನೀಡಲು ನೆರವಾಗಿದ್ದರು ಎಂದು ಗಂಭೀರ ಆರೋಪ ಮಾಡಿತ್ತು.
ಆರೋಪಿ ಪರ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಅಲ್ಲದೇ ಕೆಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದರೂ ಅದನ್ನು ಪಾಲಿಸದೇ ಯಾವುದೋ ಹಿತಾಸಕ್ತಿ ಮೇಲೆ ಕೆಲಸ ಮಾಡುತ್ತಿರುವಂತೆ ಕಾಣುತ್ತದೆ. ಆದ್ದರಿಂದ ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.