ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ಜಾತ್ಯತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.
ವಿಧಾನ ಮಂಡಲ ವಿಧಾನಸಭೆ ಅಧಿವೇಶನ ಆರಂಭಗೊಂಡ ಹಿನ್ನೆಲೆಯಲ್ಲಿ ಸೋಮವಾರ ಸುರೇಶ್ ಬಾಬು ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ಶಾಸಕಾಂಗ ಪಕ್ಷದ ನಾಯಕರಾಗಿದ್ದ ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲಿ ಸಚಿವರಾದ ಹಿನ್ನೆಲೆಯಲ್ಲಿ ಸುರೇಶ್ ಬಾಬು ಅವರನ್ನು ಆಯ್ಕೆ ಮಾಡಲಾಯಿತು.
ಮೈಸೂರಿನ ಹಿರಿಯ ಮುಖಂಡ ಜಿಟಿ ದೇವೇಗೌಡರನ್ನು ಶಾಸಕಾಂಗ ಪಕ್ಷದ ನಾಯಕನ್ನಾಗಿ ಮಾಡುವ ಮೂಲಕ ಹೊಸ ಜವಾಬ್ದಾರಿ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಹಿರಿಯ ಜಿಟಿ ದೇವೇಗೌಡರವನ್ನು ಕೈಬಿಟ್ಟು ಸುರೇಶ್ ಬಾಬು ಅವರನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಆಯ್ಕೆ ಮಾಡಿರುವುದು ಅಚ್ಚರಿ ಮೂಡಿಸಿದೆ.