Monday, June 29, 2026
Google search engine
Homeರಾಜ್ಯದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಕೌಶಲ್ಯಾಭಿವೃದ್ಧಿ ತರಬೇತಿ, ಉದ್ಯೋಗ ಅವಕಾಶ

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಕೌಶಲ್ಯಾಭಿವೃದ್ಧಿ ತರಬೇತಿ, ಉದ್ಯೋಗ ಅವಕಾಶ

ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಹೆಚ್ಚಿಸುವ ಮೂಲಕ ತರಬೇತಿ, ಉದ್ಯೋಗ ಅವಕಾಶ ಮತ್ತು ಉನ್ನತ ಶಿಕ್ಷಣ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕೆಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ.

2023-2024 ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇ. 70ಕ್ಕಿಂತ ಹೆಚ್ಚು ಅಂಕ ಪಡೆದು ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ.

ದೇಶದ ಅತಿ ದೊಡ್ಡ ಸಾಫ್ಟ್‌ವೇರ್‌ ಸಂಸ್ಥೆಗಳಲ್ಲಿ ಒಂದಾಗಿರುವ ಎಚ್‌.ಸಿ.ಎಲ್‌-ಟೆಕ್ ಬೀ ಸಂಸ್ಥೆಯು ವಿದ್ಯಾರ್ಥಿಗಳಿಗೆ ತರಬೇತಿ, ಉದ್ಯೋಗಾವಕಾಶ ಮತ್ತು ಹಣಕಾಸಿನ ನೆರವಿನೊಂದಿಗೆ ಉನ್ನತ ಪದವಿ ಶಿಕ್ಷಣ ಪಡೆಯಲು ಅವಕಾಶವನ್ನು ಕಲ್ಪಿಸಿದೆ.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದೊಂದಿಗೆ (KSDC) ಎಚ್‌ಸಿಎಲ್‌-ಟೆಕ್ ಬೀ ಸಂಸ್ಥೆಯು ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಿದೆ. ಕೆಎಸ್‌ಡಿಸಿ ವ್ಯವಸ್ಥಾಪಕ ನಿರ್ದೇಶಕ ಎಂ. ಕನಗವಲ್ಲಿಮತ್ತು ಎಚ್‌ಸಿಎಲ್‌-ಟೆಕ್ ಬೀ ರಾಜ್ಯ ಮುಖ್ಯಸ್ಥರಾದ ಆರ್. ಪಾಪಿರೆಡ್ಡಿ ಇತ್ತೀಚೆಗೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು.

ಈ ಮೂಲಕ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದೆ.

ಎಚ್‌ಸಿಎಲ್‌-ಟೆಕ್ ಬೀನಲ್ಲಿ ಇಂಟರ್ನ್‌ಶಿಪ್‌ಗಾಗಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಹತ್ತು ಸಾವಿರ ರೂಪಾಯಿ ನೀಡಲಾಗುತ್ತಿದೆ. ನಂತರ ಅದೇ ಸಂಸ್ಥೆಯಲ್ಲಿ ಉದ್ಯೋಗಿಗಳಾದರೆ ವಾರ್ಷಿಕ 1.7 ಲಕ್ಷದಿಂದ  2.2 ಲಕ್ಷ ರೂ. ವೇತನ ನೀಡಲಾಗುತ್ತದೆ. ಇದರ ಜೊತೆಗೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಪದವಿ ಶಿಕ್ಷಣ ಪಡೆಯುವ ಅವಕಾಶವನ್ನೂ ಒದಗಿಸಲಾಗುತ್ತದೆ. ತರಬೇತಿ ಪಡೆಯಲು ಶುಲ್ಕ ನಿಗದಿಪಡಿಸಲಾಗಿದೆ.

2017ರಲ್ಲಿ ಎಚ್‌.ಸಿ.ಎಲ್‌-ಟೆಕ್‌ ಬೀ ಸಂಸ್ಥೆಯು ಈ ಯೋಜನೆ ಆರಂಭಿಸಿದೆ. 2023-2024 ಶೈಕ್ಷಣಿಕ ಸಾಲಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ  2025ರಲ್ಲಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಕೂಡಲೇ https://bit.ly/TechBeeKSDC ವೆಬ್‌ಸೈಟ್‌ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬಹುದಾದ ಮೊಬೈಲ್‌ ಸಂಖ್ಯೆಗಳು: 9845454471/ 8722790340

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments