ಟಿ-20 ವಿಶ್ವಕಪ್ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿರುವ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡ ಗುರುವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಭೋಜನ ಸವಿದರು.
ಗುರುವಾರ ಬೆಳಿಗ್ಗೆ ಕೆರಿಬಿಯನ್ ನೆಲದಲ್ಲಿ ವಿಶೇಷ ವಿಮಾನದಲ್ಲಿ ಆಗಮಿಸಿದ ಟೀಂ ಇಂಡಿಯಾ ಮಧ್ಯಾಹ್ನ ಪ್ರಧಾನಿ ಮೋದಿ ಅವರನ್ನು ದೆಹಲಿಯ ಅವರ ನಿವಾಸದಲ್ಲೇ ಭೇಟಿ ಮಾಡಿ ತಮ್ಮ ಅನುಭವ ಹಂಚಿಕೊಂಡರು.
ಮೋದಿ ಜೊತೆ ತಮ್ಮ ಅನುಭವ ಹಂಚಿಕೊಂಡ ನಂತರ ಟ್ರೋಫಿ ಹಿಡಿದು ಫೋಟೊ ತೆಗೆಸಿಕೊಂಡು ಸಂಭ್ರಮಿಸಿದರು.
ಸಂಜೆ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಮೈದಾನಕ್ಕೆ ಬೃಹತ್ ಮೆರವಣಿಗೆ ಮೂಲಕ ಆಟಗಾರರು ತೆರಳಲಿದ್ದಾರೆ.
ಇದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಆಟಗಾರರಿಗೆ ಭರ್ಜರಿ ಸ್ವಾಗತ ನೀಡಲಾಗಿದ್ದು, ಆಟಗಾರರು ವಾದ್ಯಗಳಿಗೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.