Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

Tabla Legend Zakir Hussain: ಖ್ಯಾತ ತಬಲಾ ವಾದಕ ಜಾಕಿರ್ ಹುಸೇನ್ ಇನ್ನಿಲ್ಲ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
Tabla Legend Zakir Hussain
Tabla Legend Zakir Hussain

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 4 ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಮಾಂತ್ರಿಕ ತಬಲಾ ವಾದಕ ಜಾಕಿರ್ ಹುಸೇನ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದ ಕಾರಣ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ವಿಧಿವಶರಾಗಿದ್ದಾರೆ.

ಜಗತ್ತಿನ ಅತ್ಯಂತ ವೇಗದ ತಬಲಾ ವಾದಕರಾಗಿದ್ದ ಜಾಕಿರ್ ಹುಸೇನ್ ಅಸಾಮಾನ್ಯ ಕಲಾವಿದರಾಗಿ ಜಗದ್ವಿಖ್ಯಾತರಾಗಿದ್ದರು. ಜಗತ್ತಿನ ಅತ್ಯಂತ ವೇಗದ ಪಕ್ಷಿಯಾದ ಹಮ್ಮಿಂಗ್ ಬರ್ಡ್ ಗಿಂತ ವೇಗವಾಗಿ ಜಾಕಿರ್ ಹುಸೇನ್ ಬೆರಳುಗಳು ತಬಲಾ ಮೇಲೆ ಹರಿದಾಡುತ್ತವೆ ಎಂಬ ಪ್ರತೀತಿ ಇತ್ತು.

ಖ್ಯಾತ ತಬಲಾ ವಾದಕ ಅಲ್ಲಾಹ್ ರಖಾ ಅವರ ಕೊನೆಯ ಪುತ್ರರಾಗಿ ಮುಂಬೈನಲ್ಲಿ ಜನಿಸಿದ್ದ ಜಾಕಿರ್ ಹುಸೇನ್, 13ನೇ ವಯಸ್ಸಿನಲ್ಲಿ ತಂದೆ ನಿಶ್ಚಿತಾರ್ಥ, ಮದುವೆ ಕಾರ್ಯಕ್ರಮಗಳಲ್ಲಿ ತಬಲಾ ನುಡಿಸಲ್ಲ. ಅವರ ಮಗ ನುಡಿಸುತ್ತಾನೆ ಎಂದು ಹೇಳಿಕೊಂಡು ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಈ ಮೂಲಕ ಮೊದಲ ಬಾರಿ ಸಾರ್ವಜನಿಕ ಕಾರ್ಯಕ್ರಮ ನೀಡಿದ್ದ ಜಾಕಿರ್ ಮತ್ತೆಂದೂ ತಿರುಗಿ ನೋಡಲೇ ಇಲ್ಲ.

ಜಾಕಿರ್ ಹುಸೇನ್ ನಿಧನಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.

6 ದಶಕಗಳ ಕಾಲ ತಬಲಾ ವಾದಕರಾಗಿ ವೃತ್ತಿಜೀವನ ನಡೆಸಿದ ಜಾಕಿರ್ ಹುಸೇನ್ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಖ್ಯಾತ ಕಲಾವಿದರೊಂದಿಗೆ ಕೆಲಸ ಮಾಡಿದ್ದಾರೆ. ಅದರಲ್ಲೂ ಇಂಗ್ಲೀಷ್ ಗಿಟಾರ್ ವಾದಕ ಜಾನ್ ಮೆಕ್‌ಲಾಫ್ಲಿನ್, ಪಿಟೀಲು ವಾದಕ ಎಲ್.ಶಂಕರ್ ಮತ್ತು ತಾಳವಾದ್ಯ ವಾದಕ ಟಿಎಚ್ ‘ವಿಕ್ಕು’ ವಿನಾಯಕ್ ಮುಂತಾದವರೊಂದಿಗೆ ಕೈ ಜೋಡಿಸಿದ್ದರು.

ಸಂಗೀತ ಕ್ಷೇತ್ರಕ್ಕೆ ಅಭೂತಪೂರ್ವ ಸೇವೆಗಾಗಿ ಭಾರತದ ಪ್ರತಿಷ್ಠಿತ ಪ್ರಶಸ್ತಿಗಳಾದ 1988ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ್, 2023ರಲ್ಲಿ ಪದ್ಮವಿಭೂಷಣ್ ಪ್ರಶಸ್ತಿಗೆ ಪಾತ್ರರಾಗಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment