ಗೆಳತಿಯನ್ನು 40 ತುಂಡುಗಳಾಗಿ ಕತ್ತರಿಸಿದ ‘ಕಟುಕ’ ಗೆಳೆಯ!
ಮಾಂಸದಂಗಡಿಯಲ್ಲಿ ಕಟುಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಗೆಳತಿಯನ್ನು 40ರಿಂದ 50 ತುಂಡುಗಳಾಗಿ ಕತ್ತರಿಸಿ ಕೊಲೆ ಮಾಡಿದ ಆಘಾತಕಾರಿ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಕುಂತಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 25 ವರ್ಷದ ನರೇಶ್ ಬೆಂಗ್ರಾ ಎಂಬಾತನನ್ನು ಬಂಧಿಸಲಾಗಿದೆ. ಮೃತಪಟ್ಟ ಯುವತಿ ಅದೇ ಗ್ರಾಮದ ನಿವಾಸಿ ಎಂದು ತಿಳಿದು…
ಡ್ರೋಣ್ ನಿಂದ ಬಾಂಬ್ ದಾಳಿ: ಮಣಿಪುರದಲ್ಲಿ ಬಾಲಕಿ ಸೇರಿ ಇಬ್ಬರ ಸಾವು
ವಲಸಿಗರು ಡ್ರೋಣ್ ಮೂಲಕ ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ನಾಗರಿಕರು ಮೃತಪಟ್ಟು, 9 ಮಂದಿ ಗಾಯಗೊಂಡಿರುವ ಆಘಾತಕಾರಿ ಘಟನೆ ಮಣಿಪುರದಲ್ಲಿ ನಡೆದಿದೆ. ಕುಕ್ಕಿ ಉಗ್ರರು ಎಂದು ಶಂಕಿಸಲಾದ ಗುಂಪು ಡ್ರೋಣ್ ಮೂಲಕ ಬಾಂಬ್ ದಾಳಿ ನಡೆಸಿದ್ದರಿಂದ 12 ವರ್ಷದ ಬಾಲಕಿ ಹಾಗೂ ಮಹಿಳೆ ಮೃತಪಟ್ಟಿದ್ದಾರೆ. ಇಬ್ಬರು ಪೊಲೀಸರು ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ ಎಂದು ಗುಪ್ತಚರ…
ಪ್ಯಾರಾಲಿಂಪಿಕ್ಸ್: ನಿತೀಶ್, ಸುಹಾಸ್ ಫೈನಲ್ ಗೆ, ಭಾರತಕ್ಕೆ 2 ಕನಿಷ್ಠ ಬೆಳ್ಳಿ ಖಚಿತ!
ಭಾರತದ ನಿತೀಶ್ ಕುಮಾರ್ ಮತ್ತು ಸುಹಾಸ್ ಯತಿರಾಜ್ ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಪ್ರತ್ಯೇಕವಾಗಿ ಫೈನಲ್ ಪ್ರವೇಶಿಸುವ ಮೂಲಕ ಭಾರತಕ್ಕೆ ಕನಿಷ್ಠ 2 ಬೆಳ್ಳಿ ಪದಕ ಖಚಿತಪಡಿಸಿದ್ದಾರೆ. ಭಾನುವಾರ ನಡೆದ ಪುರುಷರ ಎಸ್ ಎಲ್ 3 ವಿಭಾಗದಲ್ಲಿ ನಿತೀಶ್ ಕುಮಾರ್ ಮತ್ತು ಎಸ್ ಎಲ್ 4 ವಿಭಾಗದಲ್ಲಿ ಸುಹಾಸ್ ಯತಿರಾಜ್ ಫೈನಲ್ ಪ್ರವೇಶಿಸಿದ್ದಾರೆ. ಭಾರತದ ಮತ್ತೊಬ್ಬ ಸ್ಪರ್ಧಿ…
ಹಾಸ್ಟೇಲ್ ಕೊಠಡಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಪುತ್ರಿ ಶವಪತ್ತೆ
ಹಿರಿಯ ಪೊಲೀಸ್ ಅಧಿಕಾರಿಯ 19 ವರ್ಷದ ಮಗಳ ಶವ ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಹಾಸ್ಟೇಲ್ ಕೊಠಡಿಯಲ್ಲಿ ಪತ್ತೆಯಾಗಿದೆ. ರಾಮ್ ಮನೋಹರ್ ಲೋಹಿಯಾ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅಂಕಿತಾ ರಸ್ತೋಗಿ ಮೃತಪಟ್ಟ ದುರ್ದೈವಿ. ಹಾಸ್ಟೇಲ್ ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಅಂಕಿತಾ ರಸ್ತೋಗಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಮಹಾರಾಷ್ಟ್ರ ಘಟಕದ…
ಲೋಕಾಯುಕ್ತ ವಿಚಾರಣೆಗೆ ಹಾಜರಾದ ಡಿಸಿಎಂ: ಸಿಬಿಐನೇ ಪರ್ವಾಗಿಲ್ಲ ಎಂದ ಡಿಕೆಶಿ!
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಅಕ್ರಮ ಆಸ್ತಿ ಪ್ರಕರಣದ ಕುರಿತು ಲೋಕಾಯುಕ್ತ ತನಿಖೆಯನ್ನು ಚುರುಕುಗೊಳಿಸಿದ್ದು, ಸಮನ್ಸ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ ಸುಮಾರು 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. ಸಂಜೆ 4 ಗಂಟೆಯವರೆಗೂ ವಿಚಾರಣೆ…
ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂ!
ಆಸ್ಪತ್ರೆಯಲ್ಲಿ ವೈದ್ಯರ ಸುರಕ್ಷತೆಯನ್ನು ಖಚಿತಪಡಿಸಲು ಸುಪ್ರೀಂಕೋರ್ಟ್ ರಾಷ್ಟ್ರೀಯ ಕಾರ್ಯಪಡೆ ರಚಿಸಿದ್ದು, 3 ವಾರಗಳಲ್ಲಿ ಮಧ್ಯಂತರ ವರದಿ ನೀಡುವಂತೆ ಸೂಚಿಸಿದೆ. ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಮಂಗಳವಾರ ಪ್ರಸ್ತುತ ದೇಶದಲ್ಲಿರುವ…
ಚಿಕ್ಕಮಗಳೂರು ಜಿಲ್ಲೆಯ ಮಳೆಹಾನಿಗೆ ವಿಶೇಷ ನೆರವು: ಸಚಿವ ಕೆ.ಜೆ.ಜಾರ್ಜ್
ಚಿಕ್ಕಮಗಳೂರು: ಭಾರೀ ಮಳೆಯಿಂದ ಜಿಲ್ಲೆಯಾದ್ಯಂತ ಆಗಿರುವ ಅಪಾರ ಪ್ರಮಾಣದ ಹಾನಿಗೆ ವಿಶೇಷ ಪರಿಹಾರ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಪ್ರವಾಹದಿಂದ ಆಗಿರುವ ಹಾನಿ ಮತ್ತು ಪ್ರವಾಹದಿಂದ ಆಗುತ್ತಿರುವ ಸಮಸ್ಯೆಗಳ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ…
ತುಂಬಿ ಹರಿದ ಹರಿದ್ವಾರದ ನದಿಯಲ್ಲಿ ತೇಲಿದ ಕಾರುಗಳು, ಬಸ್: ವೀಡಿಯೊ ವೈರಲ್!
ಉತ್ತರಾಖಂಡ್ ನಲ್ಲಿ ಸತತವಾಗಿ ಭಾರೀ ಮಳೆಯಾಗುತ್ತಿರುವುದರಿಂದ ಹರಿದ್ವಾರದಲ್ಲಿ ಹರ್ ಕಿ ಪುರ ನದಿ ತುಂಬಿ ಹರಿದಿದ್ದರಿಂದ ಕಾರುಗಳು ಮತ್ತು ಬಸ್ ಗಳು ಕೊಚ್ಚಿ ಹೋಗಿದ್ದು, ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಹರಿದ್ವಾರ ಸೇರಿದಂತೆ ಯಾತ್ರಾ ಕ್ಷೇತ್ರಗಳಲ್ಲಿ ಏಕಾಏಕಿ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಯಾತ್ರಿಗಳು ನದಿಗಳಿಗೆ ಈ ಸಮಯದಲ್ಲಿ ಇಳಿಯಬಾರದು ಎಂಬ…
ಮೈಸೂರು-ಮಂಗಳೂರು ಸೇರಿ ರಾಜ್ಯದ 5 ನಗರಗಳಲ್ಲಿ ಸೇಫ್ ಸಿಟಿ ಯೋಜನೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ!
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು. ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ…
ಮಳೆಗೆ ಕುಸಿದುಬಿದ್ದ ರಾಜ್ ಕೋಟ್ ವಿಮಾನ ನಿಲ್ದಾಣದ ಮೇಲ್ಫಾವಣಿ!
ಭಾರೀ ಮಳೆಗೆ ದೆಹಲಿಯ ವಿಮಾನ ನಿಲ್ದಾಣದ ಟರ್ಮಿನಲ್-1 ಮೇಲ್ಫಾವಣಿ ಕುಸಿದು ಬಿದ್ದ ಘಟನೆ ಬೆನ್ನಲ್ಲೇ ಇದೀಗ ರಾಜ್ ಕೋಟ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತವರೂರಾದ ಗುಜರಾತ್ ನ ರಾಜ್ ಕೋಟ್ ನ ವಿಮಾನ ನಿಲ್ದಾಣಕ್ಕೆ ಹೊರಗಡೆ ಹಾಕಲಾಗಿದ್ದ ಸಾಧಾರಣ ಟರ್ಮಿನಲ್ ಮೇಲ್ಛಾವಣಿ ಸಾಧಾರಣ ಮಳೆಗೆ ಕುಸಿದುಬಿದ್ದಿದೆ. ಪ್ರಯಾಣಿಕರ ಪಿಕಪ್ ಅಂಡ್ರ…