Kannadavahini

ಬಾರಿಸು ಕನ್ನಡ ಡಿಂಡಿಮವ

ಕರ್ನಾಟಕ

ಬೇಸಿಗೆಯ 3 ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು: ಹವಾಮಾನ ವರದಿ

ಬೆಂಗಳೂರು: ಮಾರ್ಚ್ ಎಪ್ರಿಲ್‌ ಮೇ ಅಂತ್ಯದವರೆಗೂ ಉತ್ತರ ಕರ್ನಾಟಕದಲ್ಲಿ ತೀವ್ರ ಬಿಸಿಲು ಕಾಡುವ ಬೆನ್ನಲ್ಲೇ, ವಾಡಿಕೆಗಿಂತ ಅಧಿಕ ಮುಂಗಾರು ಮಳೆಯಿಂದಾಗಿ ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯ ತಾಪಮಾನ ಇರಲಿದೆ ಎಂದು ಹವಾಮಾನ ಮುನ್ಸೂಚನೆ ಇದೆ. ಮಾರ್ಚ್ ನಿಂದ ಮೇ ತಿಂಗಳವರೆಗೆ ಕರ್ನಾಟಕದಲ್ಲಿ ತೀವ್ರ ಬಿಸಿಲು ಮತ್ತು ಇದೇ ಸಂದರ್ಭದಲ್ಲಿ ಅಧಿಕ ಮಳೆಯೂ ಆಗಲಿದೆ ಎಂದು ಭಾರತೀಯ ಹವಾಮಾನ…

`ಕರ್ನಾಟಕ ಉದ್ಯೋಗ ಮಿತ್ರ’ ಪೋರ್ಟಲ್ ಗೆ ಸಿಎಂ ಚಾಲನೆ: ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ!

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮ ಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಪರ್ಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಆರಂಭಗೊಂಡ ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಅವರು ಲೋಕಾರ್ಪಣೆ ಮಾಡಿದರು….

ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ತಿದ್ದುಪಡಿ: ದಾಖಲೆ ಇಲ್ಲದೇ ಖಾತೆ ಇಲ್ಲ!

ಸರ್ಕಾರಿ ಆಸ್ತಿಗಳ ರಕ್ಷಣೆಗೆ ಮತ್ತಷ್ಟು ಬಲ ತುಂಬುವ ಉದ್ದೇಶದ ಜೊತೆಗೆ ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವ ಹಾಗೂ ಸಣ್ಣ ಉದ್ದಿಮೆಗಳಿಗೆ ಸರಳ ಆಡಳಿತ ನೀಡುವ ಸಲುವಾಗಿ ಕರ್ನಾಟಕ ’ಭೂ ಕಂದಾಯ ವಿಧೇಯಕ’ಕ್ಕೆ ಅಗತ್ಯ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ತಂದಿದೆ. ಬೆಳಗಾವಿಯಲ್ಲಿ ಕಳೆದ ಡಿಸೆಂಬರ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ಈ ವಿಧೇಯಕವನ್ನು ಕಂದಾಯ ಇಲಾಖೆ ಸಚಿವ…

ಗೃಹಲಕ್ಷ್ಮೀ ಹಣದಿಂದ ಮಗಳಿಗೆ ಕಂಪ್ಯೂಟರ್ ಕೊಡಿಸಿದ ಮುಸ್ಲಿಂ ಮಹಿಳೆ!

ಮಗನಿಗೆ ಬೈಕ್ ಕೊಡಿಸಿದೆ… ಚಿನ್ನದ ಸರ ಮಾಡಿಕೊಂಡೆ.. ಹೊಳಿಗೆ ಊಟ ಹಾಕಿಸಿದೆ.. ಹೀಗೆ ರಾಜ್ಯದ ಬಡ ಮಹಿಳೆಯರು ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣದಿಂದ ಅದೆಷ್ಟು ನೆರವಾಗಿದೆ ಎಂದು ಹೇಳಿಕೊಳ್ಳುವ ಮೂಲಕ ಸುದ್ದಿ ಮಾಡುತ್ತಿದ್ದಾರೆ. ಇದೀಗ ಅಂತಹದ್ದೇ ಒಂದು ಘಟನೆ ತುಮಕೂರಿನಲ್ಲಿ ನಡೆದಿದ್ದು, ಗೃಹಲಕ್ಷ್ಮೀ ಯೋಜನೆಯ ಹಣದಿಂದ ಕೂಡಿಟ್ಟ ದುಡ್ಡಿನಿಂದ ಮುಸ್ಲಿಮ್ ಮಹಿಳೆಯೊಬ್ಬರು ಮಗಳಿಗೆ ಕಂಪ್ಯೂಟರ್…

ಜಾತಿ- ಧರ್ಮದ ಬೇಲಿ ಇಲ್ಲದ ಕಂಬಳ ಕ್ರೀಡೆ, ಕಲೆ ಸರ್ವರ ಸಂಭ್ರಮ: ಸಿಎಂ ಸಿದ್ದರಾಮಯ್ಯ

ಮಂಗಳೂರು: ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವ ಉದ್ಘಾಟಿಸಿ ಮಾತನಾಡಿ ಅವರು, ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ ಎಂದರು. ವಿವಿಧತೆಯಲ್ಲಿ…

ಶರಣಾಗಿದ್ದ 6 ನಕ್ಸಲರಿಗೆ ಜ.30ರವರೆಗೆ ನ್ಯಾಯಾಂಗ ಬಂಧನ

ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ಎನ್ ಐಎ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶರಣಾಗಿದ್ದ ನಕ್ಸಲರಿಗೆ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನ ವಿಧಿಸಿದ ಬೆನ್ನಲ್ಲೇ ಪೊಲೀಸರು 6 ಮಂದಿ ನಕ್ಸಲರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ…

ಬಳ್ಳಾರಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜೀನ್ಸ್ ಪಾರ್ಕ್ ಸ್ಥಾಪನೆ!

ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ `ಜೀನ್ಸ್ ಪಾರ್ಕ್’ ಸ್ಥಾಪಿಸಲಾಗುವುದು. ಇದಕ್ಕಾಗಿ ಈಗಾಗಲೇ 154 ಎಕರೆ ಜಮೀನನ್ನು ಸ್ವಾಧೀನಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಗುರುವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜೀನ್ಸ್ ಉಡುಪು ತಯಾರಿಕೆಯ ಕಂಪನಿಗಳೂ ಇರುವಂತೆ ನೋಡಿಕೊಳ್ಳಲಾಗುವುದು…

ಫೆ.15ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಲು ತೀರ್ಮಾನ!

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಚಾಮರಾಜನಗರ ಜಿಲ್ಲೆಯಲ್ಲಿ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ…

ವರ್ಷದ ಕೊನೆಯಲ್ಲಿ ಖರ್ಚು ಮಾಡುವ ಅಸಹ್ಯ ಅಭ್ಯಾಸ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಿಎಂ ಚಾಟಿ

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಸಹ್ಯ ಅಭ್ಯಾಸ ಬೆಳೆಸಿಕೊಂಡಿದ್ದೀರಿ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಮಂಗಳವಾರ ಸುಮಾರು ಎರಡೂವರೆ ಗಂಟೆ ಕಾಲ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಅವರು, ವರ್ಷದ ಕೊನೆ ತಿಂಗಳಲ್ಲೇ…

ಮಾರ್ಚ್ 1-8 ರವರೆಗೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು, ಜನವರಿ 6: ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯವನ್ನು ಆಧರಿಸಿ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವನ್ನು ಮಾರ್ಚ್ 1-8 ರವರೆಗೆ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯ ನಂತರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಸಿನಿಮಾಸಕ್ತರಿಗೆ…