Kannadavahini

ಬಾರಿಸು ಕನ್ನಡ ಡಿಂಡಿಮವ

bjp

ಪಶ್ಚಿಮ ಬಂಗಾಳ ಬಿಜೆಪಿಗೆ ಮಹಿಳಾ ಸಾರಥಿ?

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕತ್ವದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದ್ದು, ಇಬ್ಬರು ಪ್ರಮುಖ ಮಹಿಳಾ ನಾಯಕರನ್ನು ಪಕ್ಷ ಪರಿಗಣಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಸಂಸದೆ ಲಾಕೆಟ್ ಚಟರ್ಜಿ ಮತ್ತು ಬಂಗಾಳದ ಶಾಸಕಿ ಅಗ್ನಿಮಿತ್ರ ಪಾಲ್ ಈ ಹುದ್ದೆಗೆ ಮುಂಚೂಣಿಯಲ್ಲಿರುವ ನಾಯಕಿಯರಾಗಿದ್ದಾರೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಇಬ್ಬರೂ ನಾಯಕರನ್ನು…

ಮದ್ಯ ನೀತಿಯಿಂದ ಸರ್ಕಾರಕ್ಕೆ 2002 ಕೋಟಿ ನಷ್ಟ: ಸಿಎಜಿ ವರದಿ ಖಂಡಿಸಿದ ಆಪ್ 15 ಶಾಸಕರ ಅಮಾನತು!

ಆಮ್ ಆದ್ಮಿ ಪಕ್ಷದ ಮದ್ಯ ನೀತಿಯಿಂದ ರಾಜ್ಯ ಸರ್ಕಾರಕ್ಕೆ 2002 ಕೋಟಿ ರೂ. ನಷ್ಟವುಂಟಾಗಿದೆ ಎಂದು ಲೆಕ್ಕ ನಿಯಂತ್ರಕರು ಮತ್ತು ಮಹಾಲೇಖಕರ ವರದಿಯನ್ನು ದೆಹಲಿ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಯಿತು. ಮಂಗಳವಾರ ಆರಂಭಗೊಂಡ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸಿಎಜಿ ವರದಿಯನ್ನು ಮಂಡಿಸಿದರು. ವರದಿಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ಸದಸ್ಯರು ಪ್ರತಿಭಟಿಸಿದರು. ಈ ಹಿನ್ನೆಲೆಯಲ್ಲಿ…

ಬಿಜೆಪಿಯ ಮೈಸೂರು ಚಲೋ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ನೀಡಿದ ಕೋರ್ಟ್

ಮೈಸೂರು: ಮೈಸೂರು ಚಲೋಗೆ ಪ್ರತಿಭಟನೆಗೆ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಬಿಜೆಪಿ ಪ್ರತಿಭಟನೆಗೆ ಸಿದ್ಧತೆ ಆರಂಭಿಸಿದೆ. ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಬಾರದು ಹಾಗೂ ಯಾವುದೇ ಅನಾಹುತ ಸಂಭವಿಸಿದರೂ ಅದಕ್ಕೇ ನೀವೇ ಜವಾಬ್ದಾರರು ಎಂದು ಕೋರ್ಟ್ ಎಚ್ಚರಿಕೆ ನೀಡುವ ಮೂಲಕ ಬಿಜೆಪಿ ಪ್ರತಿಭಟನೆಗೆ ಅನುಮತಿ ನೀಡಿತ್ತು. ನ್ಯಾಯಾಲಯ ಅನುಮತಿ ನೀಡಿದ ಬೆನ್ನಲ್ಲೇ ವಿರೋಧ ಪಕ್ಷದ…

ಮೊದಲ ಬಾರಿಯ ಶಾಸಕಿ ರೇಖಾ ಗುಪ್ತಾಗೆ ಒಲಿದ ದೆಹಲಿ ಸಿಎಂ ಸ್ಥಾನ!

ದೆಹಲಿ ಮುಖ್ಯಮಂತ್ರಿ ಆಗಿ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ 27 ವರ್ಷಗಳ ನಂತರ ಅಧಿಕಾರ ಹಿಡಿಯುತ್ತಿರುವ ಬಿಜೆಪಿ ಮಹಿಳೆಗೆ ಮಣೆ ಹಾಕಿದೆ. ಶಾಲಿಮಾರ್ ಭಾಗ್ ಕ್ಷೇತ್ರದಿಂದ ಮೊದಲ ಬಾರಿ ಶಾಸಕಿ ಆಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಆರ್ ಎಸ್ ಎಸ್ ಸಕ್ರಿಯ ಕಾರ್ಯಕರ್ತೆ ಆಗಿದ್ದಾರೆ….

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ವಜಾಗೊಳಿಸಿ: ಹೈಕಮಾಂಡ್ ಗೆ ಯತ್ನಾಳ್ ಉತ್ತರ

ಗುಂಪುಗಾರಿಕೆ ಮಾಡುತ್ತಿರುವ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಸುವಂತೆ ಆಗ್ರಹಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕಮಾಂಡ್ ಗೆ ನೀಡಿದ ಉತ್ತರದಲ್ಲಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬಣ ಬಡಿದಾಟ ಮುಗಿಲುಮುಟ್ಟಿದ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ 72 ಗಂಟೆಯೊಳಗೆ ಉತ್ತರ ನೀಡುವಂತೆ ಸೂಚಿಸಿ ಯತ್ನಾಳ್ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ…

ರಾಷ್ಟ್ರೀಯ ಶಿಕ್ಷಣ ನೀತಿ: ಕೇಂದ್ರದ ಬ್ಲಾಕ್ ಮೇಲ್ ತಂತ್ರಕ್ಕೆ ತಮಿಳುನಾಡು ದಿಟ್ಟ ಉತ್ತರ!

ಚೆನ್ನೈ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳದಿದ್ದರೇ ಕೇಂದ್ರದ ಅನುದಾನ ಕಟ್ ಮಾಡುವ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆ ದಕ್ಷೀಣ ಭಾರತದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಮಾತುಗಳು ಸರ್ವಾಧಿಕಾರದ ಪ್ರತೀಕವಾಗಿದೆ ಎಂದು ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಬಹುತೇಕ ಜನ ಅಭಿಪ್ರಾಯಪಟ್ಟಿದ್ದಾರೆ. ತ್ರಿಭಾಷಾ ನೀತಿಗೆ ಸಾಂವಿಧಾನಿಕ ಮಾನ್ಯತೆಯಿಲ್ಲ ಎಂದು ಹೇಳುವ ಮೂಲಕ ರಾಷ್ಟ್ರೀಯ…

ದಿಲ್ಲಿ ಪಾಲಿಕೆಯಲ್ಲಿ ಬಿಜೆಪಿ ಆಪರೇಶನ್: ಮೂವರು ಆಪ್ ಪಾಲಿಕೆ ಸದಸ್ಯರು ಕಮಲ ತೆಕ್ಕೆಗೆ

ನವದೆಹಲಿ: ದಿಲ್ಲಿ ಗದ್ದುಗೆ ಆಕ್ರಮಿಸಿಕೊಂಡರೂ ಬಿಜೆಪಿ ಆಪರೇಶನ್ ಕಮಲ ಇಂತಿಲ್ಲ. ಈ ಬಾರಿ ಆಪ್‌ನ ಕೌನ್ಸಿಲರ್‌ಗಳಿಗೆ ಬಿಜೆಪಿ ಗಾಳ ಹಾಕಿದ್ದು, ದಿಲ್ಲಿ ಪಾಲಿಕೆಯನ್ನು ಕಬ್ಜಾ ಮಾಡಿಕೊಳ್ಳುವ ಪ್ರಯತ್ನಕ್ಕೆ ಚಾಲನೆ ನೀಡಿದೆ. ಎಂಸಿಡಿ ಕೌನ್ಸಿಲರ್ ಗಳಾದ ಅನಿತಾ ಬಸೋಯಾ, ಸಂದೀಪ್ ಬಸೋಯಾ, ನಿಖಿಲ್ ಚಾಪ್ರಾನಾ, ಧರ್ಮವೀರ್ ಶನಿವಾರ ದೆಹಲಿಯ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ್ ಸಮ್ಮುಖದಲ್ಲಿ ಬಿಜೆಪಿಗೆ…

ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್: 72 ಗಂಟೆಯಲ್ಲಿ ಉತ್ತರಿಸದಿದ್ದರೆ ಶಿಸ್ತುಕ್ರಮದ ಎಚ್ಚರಿಕೆ!

ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿ ಬಂಡಾಯ ಘೋಷಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ. ಭಿನ್ನಮತ…

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಹಿಂದೆ RSS ಕಾರ್ಯತಂತ್ರ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 27 ವರ್ಷಗಳ ನಂತರ ಬಿಜೆಪಿಗೆ ದಕ್ಕಿದ ಗೆಲುವಿನ ಹಿಂದೆ ಆರ್ ಎಸ್ ಎಸ್ ಕಾರ್ಯತಂತ್ರ ಹಾಗೂ ಶ್ರಮ ಕಾರಣ ಎಂಬುದು ಇದೀಗ ಬೆಳಕಿಗೆ ಬರುತ್ತಿದೆ. ಆಮ್ ಆದ್ಮಿ ಪಕ್ಷದ ಉಚಿತ ಯೋಜನೆಗಳಿಂದ ಸತತ ಸೋಲುಂಡಿದ್ದ ಬಿಜೆಪಿಗೆ ದೆಹಲಿ ಗದ್ಧುಗೆ ಮರೀಚಿಕೆಯಾಗಿತ್ತು. ಆದರೆ ಆರ್ ಎಸ್ ಎಸ್ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು…

1 ಲಕ್ಷ ಕೋಟಿ ಬಾಕಿ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗುತ್ತಿಗೆದಾರರ ಆರೋಪ

ಕರ್ನಾಟಕದಲ್ಲಿ ಬಿಜೆಪಿ ಸರಕಾರಕ್ಕೆ ಕಂಟಕವಾಗಿದ್ದ ಗುತ್ತಿಗೆದಾರರ ಅಳಲು ಈಗ ಅದೇ ಬಿಜೆಪಿ ಆಡಳಿತ ಇರುವ ಮಹಾರಾಷ್ಟ್ರದಲ್ಲೂ ಮಾರ್ದನಿಸಿದೆ. ಕಳೆದ ಎಂಟು ತಿಂಗಳಲ್ಲಿ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು 1 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಪಾವತಿಸಲು ವಿಫಲವಾದ ಕಾರಣ ಮಹಾರಾಷ್ಟ್ರದ ಗುತ್ತಿಗೆದಾರರು ಬೀದಿಗಿಳಿದು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿ 5…